ಆಸ್ಟ್ರೇಲಿಯಾ ವಿರುದ್ಧ ಇತಿಹಾಸ ಸೃಷ್ಟಿಸಲು ರೋಹಿತ್ ಸಜ್ಜು! ವಿಶ್ವದಾಖಲೆ ರಚಿಸಲು ಒಂದೇ ಹೆಜ್ಜೆ ಬಾಕಿ…

Rohit Sharma World Record: ಟೀಂ ಇಂಡಿಯಾ ನಾಯಕ ಪ್ರಸ್ತುತ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌’ಮನ್‌’ಗಳಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಿನಲ್ಲಿ ಶ್ರೇಷ್ಠ ವಿಶ್ವ ದಾಖಲೆಯನ್ನು ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ.

Written by - Bhavishya Shetty | Last Updated : Oct 8, 2023, 11:41 AM IST
    • ರೋಹಿತ್ ಶರ್ಮಾ ವಿಶ್ವ ದಾಖಲೆ ಮಾಡುವ ಉತ್ತಮ ಅವಕಾಶ ಪಡೆದಿದ್ದಾರೆ
    • ಟೀಂ ಇಂಡಿಯಾ ನಾಯಕ ಪ್ರಸ್ತುತ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌’ಮನ್‌’ಗಳಲ್ಲಿ ಒಬ್ಬರಾಗಿದ್ದಾರೆ
    • ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಟಾಪ್ 5 ಬ್ಯಾಟ್ಸ್‌’ಮನ್‌’ಗಳು
ಆಸ್ಟ್ರೇಲಿಯಾ ವಿರುದ್ಧ ಇತಿಹಾಸ ಸೃಷ್ಟಿಸಲು ರೋಹಿತ್ ಸಜ್ಜು! ವಿಶ್ವದಾಖಲೆ ರಚಿಸಲು ಒಂದೇ ಹೆಜ್ಜೆ ಬಾಕಿ… title=
Rohit Sharma

Rohit Sharma World Record: ವಿಶ್ವಕಪ್ 2023ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯಾವಳಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಕಾಂಗರೂಗಳ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಹಲವು ದೊಡ್ಡ ದಾಖಲೆಗಳನ್ನೂ ಮಾಡಬಹುದಾಗಿದ್ದು, ಇದರ ಜೊತೆಗೆ ನಾಯಕ ರೋಹಿತ್ ಶರ್ಮಾ ವಿಶ್ವ ದಾಖಲೆ ಮಾಡುವ ಉತ್ತಮ ಅವಕಾಶ ಪಡೆದಿದ್ದಾರೆ.

ಇದನ್ನೂ ಓದಿ: ಮೆಗಾ ಪವರ್‌ ಸ್ಟಾರ್‌ ರಾಮ್ ಚರಣ್ ಫಿಟ್ನೆಸ್ ಗುಟ್ಟೇನು ಗೊತ್ತಾ..? ಮಿಸ್‌ ಮಾಡದೇ ಓದಿ

ಟೀಂ ಇಂಡಿಯಾ ನಾಯಕ ಪ್ರಸ್ತುತ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌’ಮನ್‌’ಗಳಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಿನಲ್ಲಿ ಶ್ರೇಷ್ಠ ವಿಶ್ವ ದಾಖಲೆಯನ್ನು ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ. ರೋಹಿತ್ ಸಿಕ್ಸರ್ ಬಾರಿಸುವುದರಲ್ಲಿ ನಿಪುಣ. ಈ ಪಂದ್ಯದಲ್ಲಿ ಮೂರು ಶಾಟ್‌’ಗಳನ್ನು ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ವಿಷಯದಲ್ಲಿ ಅವರು ದಂತಕಥೆ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಲಿದ್ದಾರೆ. ವೆಸ್ಟ್ ಇಂಡೀಸ್‌’ನ ಈ ಶಕ್ತಿಶಾಲಿ ಬ್ಯಾಟ್ಸ್‌’ಮನ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 553 ಸಿಕ್ಸರ್‌’ಗಳನ್ನು ಹೊಂದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಟಾಪ್ 5 ಬ್ಯಾಟ್ಸ್‌’ಮನ್‌’ಗಳು

ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಆಟಗಾರರಲ್ಲಿ ವೆಸ್ಟ್ ಇಂಡೀಸ್‌’ನ ಕ್ರಿಸ್ ಗೇಲ್ (553) ಅಗ್ರಸ್ಥಾನದಲ್ಲಿದ್ದಾರೆ. ಇದಾದ ಬಳಿಕ ಟೀಂ ಇಂಡಿಯಾದ ಬಲಿಷ್ಠ ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ (551) ಇದ್ದಾರೆ. ಪಾಕಿಸ್ತಾನದ ಶಾಹಿದ್ ಅಫ್ರಿದಿ (476) ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌’ನ ಲೆಜೆಂಡರಿ ಬ್ಯಾಟ್ಸ್‌’ಮನ್ ಬ್ರೆಂಡನ್ ಮೆಕಲಮ್ (398) ನಾಲ್ಕನೇ ಸ್ಥಾನದಲ್ಲಿದ್ದಾರೆ. ಮತ್ತು ನ್ಯೂಜಿಲೆಂಡ್‌’ನ ಮಾರ್ಟಿನ್ ಗಪ್ಟಿಲ್ 383 ಸಿಕ್ಸರ್‌’ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ರೋಹಿತ್ ಅಂತರಾಷ್ಟ್ರೀಯ ವೃತ್ತಿಜೀವನ ಹೀಗಿದೆ…

ರೋಹಿತ್ ಶರ್ಮಾ ಇಲ್ಲಿಯವರೆಗೆ ಎಲ್ಲಾ ಮೂರು ಸ್ವರೂಪಗಳಲ್ಲಿ 451 ಪಂದ್ಯಗಳನ್ನು ಆಡಿದ್ದಾರೆ, ಅದರಲ್ಲಿ ಒಟ್ಟು 17642 ರನ್ ಗಳಿಸಿದ್ದಾರೆ. ODI ಸ್ವರೂಪದಲ್ಲಿ ಮಾಡಿದ 264 ರನ್‌’ಗಳು ಅವರ ಗರಿಷ್ಠ ಸ್ಕೋರ್ ಆಗಿದೆ. 44 ಶತಕ ಮತ್ತು 97 ಅರ್ಧಶತಕಗಳನ್ನು ಸಹ ಗಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡುತ್ತಿದ್ದು, ಈ ಪಂದ್ಯದಲ್ಲೂ ಅವರಿಂದ ದೊಡ್ಡ ಇನ್ನಿಂಗ್ಸ್‌ ನಿರೀಕ್ಷಿಸುವುದು ಖಚಿತ.

ವಿಶ್ವಕಪ್’ನಲ್ಲಿ ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್

ಇದನ್ನೂ ಓದಿ: World Cup 2023: ಆಸೀಸ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೀಗಿದೆ!

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಷ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

  

Trending News