ನವದೆಹಲಿ: ಎದೆ ನೋವಿನಿಂದಾಗಿ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದ ವೆಸ್ಟ್ ಇಂಡೀಸ್ನ ಮಾಜಿ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ತಾವು ಆರೋಗ್ಯವಾಗಿರುವುದಾಗಿ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವೆಸ್ಟ್ ವಿಂಡೀಸ್ ಕ್ರಿಕೆಟ್ ಮಂಡಳಿ "ನನಗೆ ಏನಾಗಿದೆ ಎಂಬುದರ ಬಗ್ಗೆ ಎಲ್ಲರೂ ಆತಂಕಗೊಂಡಿದ್ದು, ಕಾಳಜಿ ವಹಿಸುತ್ತಿದ್ದಾರೆ. ಜಿಮ್ನಲ್ಲಿ ಸ್ವಲ್ಪ ಹೆಚ್ಚು ಸಮಯ ಕಳೆದಿದ್ದರಿಂದ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ವೈದ್ಯರನ್ನು ಭೇಟಿ ಮಾಡುವುದು ಒಳ್ಳೆಯದು ಎಂದು ಭಾವಿಸಿ ಆಸ್ಪತ್ರೆಗೆ ದಾಖಲಾದೆ. ಸಾಕಷ್ಟು ಪರೀಕ್ಷೆಗಳನ್ನು ಮಾಡಲಾಯಿತು. ಈಗ ಆರಾಮವಾಗಿದ್ದೇನೆ, ಸ್ವಲ್ಪ ಹೊತ್ತಿನಲ್ಲೇ ಹೋಟೆಲ್ ರೂಮ್ಗೆ ಮರಳುತ್ತೇನೆ, ನಿಮ್ಮ ಕಾಳಜಿಗೆ ಧನ್ಯವಾದಗಳು" ಎಂದು ಹೇಳಿರುವ ಲಾರಾ ಅವರ ಆಡಿಯೋವನ್ನು ಪೋಸ್ಟ್ ಮಾಡಿದೆ.
UPDATE: Message from @BrianLara
"I am fine. I am recovering and I will be back in my hotel room tomorrow"
🚨AUDIO ON 🚨. Click below to hear Brian's full message ⬇️⬇️⬇️:https://t.co/mWQVBkbJtj pic.twitter.com/cogFzpEjxR— Windies Cricket (@windiescricket) June 25, 2019
ಪ್ರಸ್ತುತ ವಿಶ್ವಕಪ್ ಟೂರ್ನಿಯ ಕ್ರಿಕೆಟ್ ವಿಶ್ಲೇಷಕ ಆಗಿರುವ ಬ್ರಿಯಾನ್ ಲಾರಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಪ್ಯಾರೆಲ್ ಪ್ರದೇಶದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
2007ರಲ್ಲೇ ಎಲ್ಲ ಮಾದರಿ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡಿರುವ ಲಾರಾ, ವೆಸ್ಟ್ ಇಂಡೀಸ್ನ ದಿಗ್ಗಜ ಕ್ರಿಕೆಟರ್ಗಳಲ್ಲಿ ಒಬ್ಬರಾಗಿದ್ದಾರೆ. ಇವರು ಟೆಸ್ಟ್ ಕ್ರಿಕೆಟ್ ಇನ್ನಿಂಗ್ಸ್ವೊಂದರಲ್ಲಿ 400 ರನ್ ಗಳಿಸಿದ ವಿಶ್ವದ ಏಕೈಕ ಕ್ರಿಕೆಟಿಗ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.