ನವದೆಹಲಿ: ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅವರು ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗೆ ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿದ ಘಟನೆ ಬುಧವಾರ ಇಂದೋರ್ ನಲ್ಲಿ ನಡೆದಿದೆ.
ನಗರದ ಗಂಜಿ ಕಾಂಪೌಂಡ್ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಆಗಮಿಸಿದ್ದ ಸರ್ಕಾರಿ ಅಧಿಕಾರಿಗೆ ಬಿಜೆಪಿ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯ ಅವರ ಪುತ್ರ ಆಕಾಶ್ ವಿಜಯವರ್ಗೀಯ ಅವರು ಕ್ರಿಕೆಟ್ ಬ್ಯಾಟ್ನಿಂದ ಪದೇಪದೇ ಥಳಿಸಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
#WATCH Madhya Pradesh: Akash Vijayvargiya, BJP MLA and son of senior BJP leader Kailash Vijayvargiya, thrashes a Municipal Corporation officer with a cricket bat, in Indore. The officers were in the area for an anti-encroachment drive. pic.twitter.com/AG4MfP6xu0
— ANI (@ANI) June 26, 2019
ಶಾಸಕ ಆಕಾಶ್ ವಿಜಯವರ್ಗೀಯ ಮತ್ತು ಅವರ ಬೆಂಬಲಿಗರು ಗಲಾಟೆ ಆರಂಭಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದೋರ್ನ ರಾಜ್ವಾಡಾದಲ್ಲಿ ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆ ವಿರುದ್ಧ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಆಕಾಶ್ ಈ ತಿಂಗಳ ಆರಂಭದಲ್ಲಿ ಭಾರೀ ಸುದ್ದಿಯಾಗಿದ್ದರು. ಈ ಬೆನ್ನಲ್ಲೇ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗೆ ಥಳಿಸಿದ ಘಟನೆ ಬೆಳಕಿಗೆ ಬಂದಿದೆ.