ಚಿಕ್ಕಬಳ್ಳಾಪುರದಲ್ಲಿ ನಗರ ಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ, ಗಂಭೀರ ಗಾಯ

ಮಾರಣಾಂತಿಕ ಹಲ್ಲೆ  ಮಾಡಿದ್ದರಿಂದ ನಗರಸಭೆ ಸದಸ್ಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

Written by - Manjunath N | Last Updated : Oct 14, 2023, 11:49 AM IST
  • ಚಿಕ್ಕಬಳ್ಳಾಪುರ ಎಸ್‌ಪಿ ಡಿ.ಎಲ್. ನಾಗೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
  • ನಗರಸಭೆ ಸದಸ್ಯನ ಮೇಲೆ ಹಲ್ಲೆಗೆ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರಿಂದ ಚಿಂತಾಮಣಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
  • ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.
 ಚಿಕ್ಕಬಳ್ಳಾಪುರದಲ್ಲಿ ನಗರ ಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ, ಗಂಭೀರ ಗಾಯ title=

ಚಿಕ್ಕಬಳ್ಳಾಪುರ: ಮಾರಣಾಂತಿಕ ಹಲ್ಲೆ  ಮಾಡಿದ್ದರಿಂದ ನಗರಸಭೆ ಸದಸ್ಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಧಾರವಾಡದ ವಿಜ್ಞಾನಿಗಳು..!

26ನೇ ವಾರ್ಡ್‌ ಸದಸ್ಯ ಅಗ್ರಹಾರ ಮುರುಳಿ ಗಾಯಾಳು  ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಂಬಲಿತ ಕುಮಾರ್ ರೆಡ್ಡಿ ಆಪ್ತ ಜಾನ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಅಗ್ರಹಾರ ಮುರುಳಿ ಅವರು ಜೆಡಿಎಸ್‌ನ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಬೆಂಬಲಿಗರಾಗಿದ್ದಾರೆ. ಹಲ್ಲೆಯಿಂದ ಅವರ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: IND vs PAK, ICC Cricket World Cup 2023: ಇಂದು-ಭಾರತ-ಪಾಕ್ ಕದನ: ವಿಜಯ ಮಾಲೆ ಯಾರ ಕೊರಳಿಗೆ? ಇತಿಹಾಸ ಹೇಳುವುದೇನು? 

ನಗರಸಭೆ ಸದಸ್ಯ ಜಗದೀಶ್ ರೆಡ್ಡಿ ಸಹೋದರ ಕುಮಾರ್ ರೆಡ್ಡಿ ಗ್ಯಾಂಗ್‌ ವಿರುದ್ಧ ಕೊಲೆ ಯತ್ನ ಆರೋಪ ಕೇಳಿಬಂದಿದ್ದು, ಚಿಕ್ಕಬಳ್ಳಾಪುರ ಎಸ್‌ಪಿ ಡಿ.ಎಲ್. ನಾಗೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರಸಭೆ ಸದಸ್ಯನ ಮೇಲೆ ಹಲ್ಲೆಗೆ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರಿಂದ ಚಿಂತಾಮಣಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News