ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ- ಎಚ್.ಡಿ.ಕುಮಾರಸ್ವಾಮಿ 

ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ/

Written by - Manjunath N | Last Updated : Oct 15, 2023, 03:38 PM IST
  • 40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ?
  • ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ.
  • ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು?
 ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ- ಎಚ್.ಡಿ.ಕುಮಾರಸ್ವಾಮಿ  title=

ಬೆಂಗಳೂರು: ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ/

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ...ಕಳ್ಳನ ಮನಸ್ಸು ಹುಳ್ಳುಳ್ಳಗೆ...ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ : ಬಸವರಾಜ ಬೊಮ್ಮಾಯಿ

"ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ" ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ.ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ.ಅಂದಹಾಗೆ, ನಾನು ಐಟಿ ಪ್ರತಿನಿಧಿಯೂ ಅಲ್ಲ, ಈಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ? ಎಂದು ಅವರು ಹೇಳಿದರು.

ಇದನ್ನೂ ಓದಿ: 2025ಕ್ಕೆ ಉದ್ಘಾಟನೆ ಆಗುತ್ತಾ ಬೆಂಗಳೂರಿನ ಈಜೀಪುರ ಫ್ಲೈ ಓವರ್..?

40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು.ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ?  ಎಂದು ಅವರು ಪ್ರಶ್ನಿಸಿದ್ದಾರೆ.

ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು!! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಅವರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News