ಬಳ್ಳಾರಿ: ಕೇಂದ್ರ ಸರ್ಕಾರದ ಸಹಾಯಧನ, ಎನ್.ಎಮ್.ಡಿ.ಸಿ ಹಾಗೂ ಸಿ.ಎಸ್.ಆರ್. ಅನುದಾನದಡಿ ಪೆÇ್ರೀತ್ಸಾಹ ಧನ ಹಾಗೂ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ವಸತಿ ರಹಿತ ಬೀದಿ ಬದಿ ವ್ಯಾಪಾರಸ್ಥರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಪಿಎಂಎವೈ, ಹೆಚ್ಎಫ್ಎ, ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆಯಡಿ ನಗರದ ಮುಂಡ್ರಿಗಿ ಆಶ್ರಯ ಬಡಾವಣೆಯಲ್ಲಿ ಜಿ+2 ಮಾದರಿಯ 5616 ಮನೆಗಳ ನಿರ್ಮಾಣ ಯೋಜನೆ ಅನುಷ್ಠಾನಗೊಳಿಲಾಗುತ್ತಿದೆ.
ಇದನ್ನೂ ಓದಿ: ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ
ವಸತಿ ಸೌಲಭ್ಯ ಪಡೆಯಲು ಇಚ್ಛಿಸುವ ನಗರದ ವಸತಿ ರಹಿತ (ಸ್ವಂತ ಮನೆ ಇಲ್ಲದೇ ಇರುವ) ಬೀದಿ ಬದಿ ವ್ಯಾಪಾರಸ್ಥರು ಆರ್ಹತೆಯ ಮಾನದಂಡ ಹಾಗೂ ಫಲಾನುಭವಿ ವಂತಿಕೆ ಪಾವತಿಸಲು ಶಕ್ತರಾಗಿರುವ ಹಾಗೂ ಆಸಕ್ತಿ ಹೊಂದಿರುವ ಕುಟುಂಬಗಳು ಕೂಡಲೇ ನಿಗಧಿತ ನಮೂನೆಯ ಅರ್ಜಿ ಪಡೆದು ಅವಶ್ಯಕ ಹಾಗೂ ಅಗತ್ಯ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆಯ ಹಳೇ ಕಚೇರಿಗೆ ಭೇಟಿ ನಿಡಿ ಅರ್ಜಿ ಸಲ್ಲಿಸಬಹುದು. ನವೆಂಬರ್.06 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ
ಅರ್ಹತೆ ಮಾನದಂಡ:
ವಸತಿ ರಹಿತರಾಗಿರಬೇಕು, ನಗರದ ನಿವಾಸಿಗಳಾಗಿರಬೇಕು, ಬೀದಿ ಬದಿಯ ವ್ಯಾಪಾರಸ್ಥರ ಗುರುತಿನ ಚೀಟಿ ಹೊಂದಿರಬೇಕು ಅಥವಾ ಪಾಲಿಕೆಯಿಂದ ಪಡೆಯಲಾದ ಎಲ್.ಓ.ಆರ್ ಪ್ರಮಾಣ ಪತ್ರ ಹೊಂದಿರಬೇಕು, ವಾರ್ಷಿಕ ಆದಾಯ ರೂ.3 ಲಕ್ಷ ಮೀರಿರಬಾರದು, ಫಲಾನುಭವಿ ವಂತಿಗೆ ಪಾವತಿಸುವುದು ಹಾಗೂ ಬ್ಯಾಂಕ್ ಸಾಲ ಮರುಪಾವತಿ ಮಾಡಲು ಬದ್ದರಾಗಿರಬೇಕು, ರೂ.90 ಸಾವಿರ ಆದಾಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ಸಾಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.