ಬೆಂಗಳೂರು: ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ `ನಮ್ಮ ಮೆಟ್ರೋ’ದಲ್ಲಿ ಪ್ರಯಾಣ ಮಾಡಿ, ಖುಷಿ ಅನುಭವಿಸಿದರು.
ಈ ಬಗ್ಗೆ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, 'ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ ಬಂದಿಲ್ಲ. ಹೀಗಾಗಿ, ನಮ್ಮ ರಾಜಧಾನಿಯಲ್ಲಿ ಈವರೆಗೆ ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಸಿಕ್ಕಿರಲಿಲ್ಲ. ಇವತ್ತು ವಾರದ ದಿನವಾದ್ದರಿಂದ ಸಂಚಾರ ದಟ್ಟಣೆ ಇರುತ್ತದೆ ಎನ್ನುವುದು ಗೊತ್ತಿತ್ತು. ಹೀಗಾಗಿ, ಮೊದಲೇ ನಮ್ಮ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೆ. ಇದರಂತೆ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ' ಎಂದು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ- ದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ
ಪ್ರಯಾಣದುದ್ದಕ್ಕೂ ಸಹ ಪ್ರಯಾಣಿಕರ ಜೊತೆ ಮಾತನಾಡಿಕೊಂಡು, ನಮ್ಮ ಮೆಟ್ರೋದ ಬಗ್ಗೆ ಕೇಳಿಕೊಂಡು ಬಂದೆ ಎಂದು ತಮ್ಮ ಖುಷಿಯನ್ನು ಹಂಚಿಕೊಂಡ ಸಚಿವ ಎಂ.ಬಿ. ಪಾಟೀಲ, ಪ್ರತಿಯೊಬ್ಬರಿಗೂ ಮೆಟ್ರೋದಿಂದ ಸುಗಮ ಸಂಚಾರ ಸಾಧ್ಯವಾಗಿದೆ ಎಂದು ಹೇಳಿದರು.
ಸಂಚಾರ ದಟ್ಟಣೆಯ ಸಮಸ್ಯೆ ಆಧುನಿಕ ನಗರಗಳ ಭಾಗವಾಗಿ ಬಿಟ್ಟಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ. ಇದರಿಂದ ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಜೊತೆಗೆ ಇದು ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಅಲ್ಲದೆ, ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು ಎಂದು ಸಚಿವರು ವಿವರಿಸಿದರು.
ಇದನ್ನೂ ಓದಿ- ತಿಪಟೂರು ಬೆಸ್ಕಾಂ ಕಚೇರಿಗೆ ಬೀಗ ಜಡಿದು ರೈತರ ಪ್ರೊಟೆಸ್ಟ್
ಕೆಂಗೇರಿಯಲ್ಲಿ ಇಳಿದ ಅವರು, ಅಲ್ಲಿಂದ ಮುಂದಕ್ಕೆ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯ ಕಾರ್ಯಕ್ರಮಕ್ಕೆ ತೆರಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.