ಕ್ರೀಡಾಪಟುಗಳಿಗೆ ಎಲ್ಲಾ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ  ತಿಳಿಸಿದ್ದಾರೆ. 

Written by - Ranjitha R K | Last Updated : Oct 18, 2023, 01:41 PM IST
  • ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ
  • ಪದಕ ವಿಜೇತರಿಗೆ ಸಿಎಂ ಅಭಿನಂದನೆ
  • ಮೀಸಲಾತಿ ನೀಡುವ ಕುರಿತು ಪರಿಶೀಳಿಸಿ ಕ್ರಮ ಎಂದ ಸಿಎಂ
ಕ್ರೀಡಾಪಟುಗಳಿಗೆ ಎಲ್ಲಾ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯ ಬಗ್ಗೆ ಕ್ರಮ  :  ಸಿಎಂ  ಸಿದ್ದರಾಮಯ್ಯ  title=

ಬೆಂಗಳೂರು : ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಪದಕ ವಿಜೇತರಿಗೆ ನಗದು ಪುರಸ್ಕಾರ ಪ್ರದಾನ ಮಾಡಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿನ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಇದೇ ರೀತಿ ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : Cauvery Water Dispute: 10 ಸಾವಿರ ಕ್ಯೂಸೆಕ್ಸ್ ಒಳಹರಿವು ಇದೆ ಎಂದು ಏಕೆ ಹೇಳ್ಬೇಕಿತ್ತು?- ಬೊಮ್ಮಾಯಿ

ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಗೆದ್ದವರಿಗೆ ನಗದು ಬಹುಮಾನ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು  ಎದ್ನು ಹೇಳಿದ್ದಾರೆ. 
ಈ ಬಾರಿ ರಾಜ್ಯದಿಂದ  8 ಜನ ಪದಕ ಗೆದ್ದಿದ್ದು, ಸರ್ಕಾರ  ಎಲ್ಲರಿಗೂ ಅಭಿನಂದನೆ ಸಲ್ಲಿಸಿದೆ. 

ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿರುವ ಬಗ್ಗೆ ಸಿಎಂ ಸನತಸ ವ್ಯಕ್ತಪಡಿಸಿದ್ದಾರೆ. ಈ ಬಾರಿ 107 ಪದಕ ಗೆದ್ದಿರುವ ಕ್ರೀಡಾಪಟುಗಳ ಸಾಧನೆಯನ್ನು ಸಿದ್ದರಾಮಯ್ಯ ಕೊಂಡಾಡಿದ್ದಾರೆ.

ಇದನ್ನೂ ಓದಿ : ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ.ಶಿವಕುಮಾರ್

ರಾಜ್ಯದ ಪದಕ ವಿಜೇತರ ಪಟ್ಟಿ ಹೀಗಿದೆ : 
ರಾಜೇಶ್ವರಿ ಗಾಯಕ್ವಾಡ್‌ (ಕ್ರಿಕೆಟ್- ಚಿನ್ನ), 
ರೋಹನ್‌ ಬೋಪಣ್ಣ (ಟೆನ್ನಿಸ್- ಮಿಕ್ಸ್‌ಡ್‌ ಡಬಲ್ಸ್- ಚಿನ್ನ), 
ಮಿಜೋ ಚಾಕೋ ಕುರಿಯನ್‌, ನಿಹಾಲ್‌ ಜೋಯಲ್‌ (ಅಥ್ಲೆಟಿಕ್ಸ್‌  ಪುರುಷರ 4*400 ಮೀ. ರಿಲೇ -ಕಾಯ್ಡಿರಿಸಿದ ಕ್ರೀಡಾಪಟು- ಚಿನ್ನ), 
ಮಿಥುನ್‌ ಮಂಜುನಾಥ್‌ (ಪುರುಷರ ಬ್ಯಾಡ್ಮಿಂಟನ್- ಬೆಳ್ಳಿ), 
ಸಾಯಿ ಪ್ರತೀಕ್‌ (ಪುರುಷರ ಬ್ಯಾಡ್ಮಿಂಟನ್‌ ಬೆಳ್ಳಿ), 
ದಿವ್ಯಾ (ಶೂಟಿಂಗ್‌- ಎರಡು ಬೆಳ್ಳಿ ಪದಕ), 
ತರಬೇತುದಾರರಾದ ವಿ.ತೇಜಸ್ವಿನಿ ಬಾಯಿ (ಕಬಡ್ಡಿ- ಚಿನ್ನ), 
ಅಂಕಿತ ಬಿ.ಎಸ್. (ಹಾಕಿ- ಕಂಚು),
 ಸಿ.ಎ.ಕುಟ್ಟಪ್ಪ (ಬಾಕ್ಸಿಂಗ್‌ ಮುಖ್ಯ ತರಬೇತುದಾರರು- 1 ಬೆಳ್ಳಿ ಮತ್ತು 4 ಕಂಚು) 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News