ಕಲ್ಯಾಣಸ್ವಾಮಿ ಮಠದಲ್ಲಿ ದಸರಾ ಆಚರಣೆ; ಸಚಿವ ನಾಗೇಂದ್ರ ಭಾಗಿ

Dussehra celebration: ಬಳ್ಳಾರಿ ನಗರದ ಕಮ್ಮರಚೇಡು ಕಲ್ಯಾಣ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀದೇವಿ ಪುರಾಣ ಪ್ರವಚನ ಹಾಗೂ ದಸರಾ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಭಾಗವಹಿಸಿದರು. 

Written by - Savita M B | Last Updated : Oct 24, 2023, 08:33 PM IST
  • ಕಲ್ಯಾಣ ಶ್ರೀಗಳಿಂದ ಅಶೀರ್ವಚನ ಪಡೆದು ಸಚಿವ ಬಿ.ನಾಗೇಂದ್ರ ಅವರು ಮಾತನಾಡಿದರು.
  • ಸಚಿವರಿಂದ ಶ್ರೀಗಳಿಗೆ ಗೌರವ ಸಮರ್ಪಣೆ ಅರ್ಪಿಸಲಾಯಿತು
  • ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಭಾಗವಹಿಸಿದರು.
ಕಲ್ಯಾಣಸ್ವಾಮಿ ಮಠದಲ್ಲಿ ದಸರಾ ಆಚರಣೆ; ಸಚಿವ ನಾಗೇಂದ್ರ ಭಾಗಿ title=

Kalyanaswamy Math: ಕಲ್ಯಾಣ ಶ್ರೀಗಳಿಂದ ಅಶೀರ್ವಚನ ಪಡೆದು ಸಚಿವ ಬಿ.ನಾಗೇಂದ್ರ ಅವರು ಮಾತನಾಡಿದರು. ಹಲವಾರು ಸಮುದಾಯದವರು ವಾಸ ಮಾಡುವಂತ ಭಾಗದಲ್ಲಿ ಕಲ್ಯಾಣ ಶ್ರೀಗಳು ಮಠವನ್ನ ಕಟ್ಟಿ ಬೆಳಸುವಲ್ಲಿ ಬಹಳ ಶ್ರಮ ಪಟ್ಟಿದ್ದಾರೆ ಹಾಗೇ ನವರಾತ್ರಿ ಉತ್ಸವಗಳನ್ನ ನಡೆಸುವ ಮೂಲಕ ಮಹಿಳೆಯರಲ್ಲಿ ಮಕ್ಕಳಲ್ಲಿ ಸಂಪ್ರದಾಯ ಧರ್ಮ ಜಾಗೃತಿ ಮೂಡಿಸುವಂತ ಕಾರ್ಯಗಳನ್ನ ನಡೆಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ-ಬಿಬಿಎಂಪಿ ನಿಯಮ ಉಲ್ಲಂಘಿಸಿದ ಪಬ್, ಬಾರ್, ಮಾಲೀಕರಿಗೆ ನೋಟೀಸ್

 ಅಲ್ಲದೆ ಕಲಾ ಪ್ರತಿಭೆಗಳನ್ನ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಕಲ್ಯಾಣ ಮಠ ಬಡ ಮಠವಲ್ಲ ಮಠಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಕೊಡಿಸುವ ಕೆಲಸ ಮಾಡುವುದಲ್ಲದೆ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ ಕಲಬುರಗಿಯ ಸಿದ್ದಲಿಂಗ ಜಗದ್ಗುರುಗಳು ಅಶೀರ್ವಚನ ನೀಡಿದರು. 

ಇದನ್ನೂ ಓದಿ-ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ಸತೀಶ್ ಅವರಿಗೆ ಹಿಂಸೆ ಆಗುತ್ತಿದೆ: ರಮೇಶ್ ಜಾರಕಿಹೊಳಿ

ನಂತರ ಸಚಿವರಿಂದ ಶ್ರೀಗಳಿಗೆ ಗೌರವ ಸಮರ್ಪಣೆ ಅರ್ಪಿಸಲಾಯಿತು. ನಂತರ ಮಠಾದೀಶರ ಪರಿಷತ್ತಿನ ಅಧ್ಯಕ್ಷರಾದ ಕಲ್ಯಾಣ ಸ್ವಾಮಿಗಳ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರಿಗೆ ಅಶೀರ್ವದಿಸಿ ಸನ್ಮಾನಿಸಲಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News