ODI World Cup Points Table : ಮಂಗಳವಾರ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ (ICC ODI World
Cup-2023)ದಕ್ಷಿಣ ಆಫ್ರಿಕಾ ತಂಡ ದೊಡ್ಡ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 149 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ದ.ಆಫ್ರಿಕಾ ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲುಗೈ ಸಾಧಿಸಿದೆ. ಆದರೆ, ಇದರಲ್ಲಿ ಕಳೆದ ಪಂದ್ಯದಲ್ಲಿ ಭಾರತದ ಎದುರು ಸೋತಿದ್ದ ನ್ಯೂಜಿಲೆಂಡ್ ತಂಡಕ್ಕೆ ಹಿನ್ನೆಡೆಯಾಗಿದೆ.
ಹೀನಾಯ ಸೋಲು ಕಂಡ ಬಾಂಗ್ಲಾದೇಶ :
ಅಕ್ಟೋಬರ್ 24 ಮಂಗಳವಾರ ಮುಂಬೈನ ಪ್ರತಿಷ್ಠಿತ ವಾಂಖೆಡೆ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವೆ ವಿಶ್ವಕಪ್ ಪಂದ್ಯ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ಪ್ರೋಟೀಸ್ ತಂಡ 382 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಬಲಿಷ್ಠ ಫಾರ್ಮ್ ನಲ್ಲಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ 140 ಎಸೆತಗಳಲ್ಲಿ 15 ಬೌಂಡರಿ ಹಾಗೂ 7 ಸಿಕ್ಸರ್ ಗಳ ನೆರವಿನಿಂದ 174 ರನ್ ಗಳಿಸಿ ಅತ್ಯುತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಉತ್ತರವಾಗಿ ಮಹಮ್ಮದುಲ್ಲಾ (111) ಶತಕದ ಹೊರತಾಗಿಯೂ ಬಾಂಗ್ಲಾದೇಶ ತಂಡ 46.3 ಓವರ್‌ಗಳಲ್ಲಿ 233 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ : ವಿಶ್ವಕಪ್ ನಡುವೆ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ!
ಅಂಕಪಟ್ಟಿಯಲ್ಲಿ ಬದಲಾವಣೆ :
ದಕ್ಷಿಣ ಆಫ್ರಿಕಾದ ಈ ದೊಡ್ಡ ಗೆಲುವಿನಿಂದಾಗಿ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟೂರ್ನಿಯಲ್ಲಿ ಈವರೆಗೆ ಅಜೇಯವಾಗಿದ್ದು ಅಗ್ರಸ್ಥಾನದಲ್ಲಿದೆ. ಈ ನಡುವೆ ನ್ಯೂಜಿಲೆಂಡ್ ಗೆ ಭಾರೀ ಹಿನ್ನಡೆಯಾಗಿದೆ. ಕಳೆದ ಪಂದ್ಯದಲ್ಲಿ ಭಾರತದ ಎದುರು ನ್ಯೂಜಿಲೆಂಡ್ ಸೋಲನುಭವಿಸಿತ್ತು. ಆದರೆ, ಇದೀಗ ದಕ್ಷಿಣ ಆಫ್ರಿಕಾದ ಗೆಲುವು ನ್ಯೂಜಿಲೆಂಡ್ ಅನ್ನು ಅಂಕ ಪಟ್ಟಿಯಲ್ಲಿ ಕೆಳಕ್ಕೆ ತಳ್ಳಿದೆ. ಬಾಂಗ್ಲಾದೇಶವನ್ನು ಸೋಲಿಸಿದ ದಕ್ಷಿಣ ಆಫ್ರಿಕಾ 8 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದೆ. ಕಿವೀಸ್ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. ಉಭಯ ತಂಡಗಳು 4 ಪಂದ್ಯಗಳಿಂದ 8-8 ಅಂಕಗಳನ್ನು ಹೊಂದಿವೆ. ಆದರೆ ನೆಟ್ ರನ್ ರೇಟ್‌ನಲ್ಲಿ ದಕ್ಷಿಣ ಆಫ್ರಿಕಾ ಮೇಲು ಗೈ ಸಾಧಿಸಿದೆ.
ಕೆಳ ಹಂತದಲ್ಲಿ ಇಂಗ್ಲೆಂಡ್ :
ಆಸ್ಟ್ರೇಲಿಯಾ ತಂಡ ಪ್ರಸಕ್ತ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇದಾದ ಬಳಿಕ ಪಾಕಿಸ್ತಾನ 5ನೇ ಹಾಗೂ ಅಫ್ಘಾನಿಸ್ತಾನ ಆರನೇ ಸ್ಥಾನದಲ್ಲಿದೆ. ಈ ಮೂರು ತಂಡಗಳು 4-4 ಅಂಕಗಳನ್ನು ಹೊಂದಿವೆ. ಅಫ್ಘಾನಿಸ್ತಾನ ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿತ್ತು. ನೆದರ್ಲೆಂಡ್ಸ್ ಏಳನೇ ಸ್ಥಾನದಲ್ಲಿದ್ದು, ಶ್ರೀಲಂಕಾ 8ನೇ ಸ್ಥಾನದಲ್ಲಿದೆ. ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ 9ನೇ ಸ್ಥಾನದಲ್ಲಿದ್ದರೆ ಬಾಂಗ್ಲಾದೇಶ ಕೊನೆಯ ಸ್ಥಾನದಲ್ಲಿದೆ. ನೆದರ್ಲೆಂಡ್, ಶ್ರೀಲಂಕಾ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಲಾ 2 ಅಂಕ ಹೊಂದಿವೆ.
ಇದನ್ನೂ ಓದಿ : ಟೀಂ ಇಂಡಿಯಾದ 20 ವರ್ಷ ಹಳೆಯ ದಾಖಲೆ ಮುರಿದ ಅಫ್ಘಾನಿಸ್ತಾನ !
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.