Andhra Train Accident: ಆಂಧ್ರಪ್ರದೇಶದಲ್ಲಿ ಎರಡು ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಈ ರೈಲು ದುರಂತದಲ್ಲಿ ಇದುವರೆಗೂ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮಾನವ ದೋಷದಿಂದ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿದ್ದು, ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸಿರಲಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದೆ.
ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ನಿಂತಿದ್ದು. ಇದೇ ವೇಳೆ ಬಂದ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಮೂರು ಬೋಗಿಗಳನ್ನು ಹಳಿತಪ್ಪಿವೆ. ಸ್ಥಳದಲ್ಲಿನ ಇತ್ತೀಚಿನ ಚಿತ್ರಗಳು ಹಳಿತಪ್ಪಿದ ಕೋಚ್‌ಗಳು ಮತ್ತು ಜನರು ಸುತ್ತಲೂ ನೆರೆದಿರುವುದನ್ನು ತೋರಿಸಿದೆ.
#WATCH | Drone visuals of the train collision in Vizianagaram, Andhra Pradesh. Rescue operations underway pic.twitter.com/ou24l03HP1
— ANI (@ANI) October 30, 2023
#WATCH | Andhra Pradesh train accident: Rescue operations continue in Vizianagaram district.
As per the data, 9 casualties are there and 29 people have been injured: Biswajit Sahu, CPRO, East Coast Railway. pic.twitter.com/vTT5808GhE
— ANI (@ANI) October 30, 2023
ಈ ರೈಲು ದುರಂತಕ್ಕೆ ಸಂಬಂಧಿಸಿದಂತೆ ದೆಹಲಿ ರೈಲ್ವೆ ಸಚಿವಾಲಯದ ವಾರ್ ರೂಮ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ. ಈ ಮಧ್ಯೆ, ಪ್ರಯಾಣಿಕರ ಸಹಾಯಕ್ಕಾಗಿ ಈಸ್ಟ್ ಕೋಸ್ಟ್ ರೈಲ್ವೇ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
Train Accident between Alamanda and Kantakapalle Stations in Vizianagaram-Kottavalasa Rly section of Waltair Division of ECoR in Howrah-Chennai Main Line. @RailMinIndia
Helpline Numbers ...👇👇👇 pic.twitter.com/ahAgX4Kohd
— East Coast Railway (@EastCoastRail) October 29, 2023
ಇದನ್ನೂ ಓದಿ- ತತ್ಕಾಲ್ ಪಾಸ್ಪೋರ್ಟ್ ಪಡೆಯುವುದು ಹೇಗೆ ಗೊತ್ತೇ?
ಘಟನೆ ಕುರಿತಂತೆ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಎಕ್ಸ್-ಗ್ರೇಷಿಯಾ ಪರಿಹಾರ ವಿತರಣೆ ಪ್ರಾರಂಭವಾಗಿದೆ - ಈ ಘಟನೆಯಲ್ಲಿ ಮೃತಪಟ್ಟವರಿಗೆ ₹10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಇದೇ ವೇಳೆ ಗಂಭೀರವಾಗಿ ಗಾಯಗೊಂಡವರಿಗೆ ₹2.5 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾಗಿರುವ ಸಂತ್ರಸ್ತರಿಗೆ ₹50,000ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
All injured shifted to hospitals.
Ex-gratia compensation disbursement started - ₹10 Lakh in case of death,
₹2.5 Lakh towards grievous and ₹50,000 for minor injuries.— Ashwini Vaishnaw (@AshwiniVaishnaw) October 29, 2023
ಆಂಧ್ರ ಪ್ರದೇಶದಲ್ಲಿ ಸಂಭವಿಸಿರುವ ಈ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಅವಲೋಕಿಸಿದ್ದಾರೆ.
PM @narendramodi spoke to Railway Minister Shri @AshwiniVaishnaw and took stock of the situation in the wake of the unfortunate train derailment between Alamanda and Kantakapalle section.
Authorities are providing all possible assistance to those affected. The Prime Minister…
— PMO India (@PMOIndia) October 29, 2023
ಅಪಘಾತದಲ್ಲಿ ಮೃತಪಟ್ಟವರಿಗೆ ಆಂಧ್ರ ಮುಖ್ಯಮಂತ್ರಿ ಸಂತಾಪ:
ಮುಖ್ಯಮಂತ್ರಿ ಕಚೇರಿ ಸಾಮಾಜಿಕ ಮಾಧ್ಯಮದ ಮೂಲಕ ಸಂತಾಪ ಸೂಚಿಸಿರುವ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, "ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿ ರೈಲು ಅಪಘಾತ ಒಂದು ತೀವ್ರ ಆಘಾತಕಾರಿ ಘಟನೆ. ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶಿಸಸಲಾಗಿದೆ" ಎಂದು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ- ಮುಂದಿನ 2 ದಿನ ಈ ಭಾಗಗಳಲ್ಲಿ ಭರ್ಜರಿ ಮಳೆ: ಗುಡುಗು-ಸಿಡಿಲಿನ ಆರ್ಭಟ, ಬಿರುಗಾಳಿ ಜೊತೆ ಜಲಪ್ರವಾಹದ ಭೀತಿ
"ಸಮೀಪದ ಜಿಲ್ಲೆಗಳಾದ ವಿಶಾಖಪಟ್ಟಣ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲು ಮತ್ತು ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಘಟನೆಗೆ ಸಂಬಂಧಿಸಿದ ವಿವರಗಳನ್ನು ಕಾಲಕಾಲಕ್ಕೆ ಅವರಿಗೆ ವರದಿ ಮಾಡುವಂತೆಯೂ" ಸಿಎಂ ಆದೇಶಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.