ಬಹುಮತ ಸಾಬೀತುಪಡಿಸಲು ವಿಫಲವಾದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ: ಕಾಂಗ್ರೆಸ್ ಸಂಸದ

ಕಾಂಗ್ರೆಸ್-ಜೆಡಿ (ಎಸ್) ಶಾಸಕರನ್ನು ಖರೀದಿಸಲು ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಹುಸೇನ್ ಆರೋಪಿಸಿದ್ದಾರೆ.

Last Updated : Jul 8, 2019, 06:45 PM IST
ಬಹುಮತ ಸಾಬೀತುಪಡಿಸಲು ವಿಫಲವಾದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ: ಕಾಂಗ್ರೆಸ್ ಸಂಸದ title=

ನವದೆಹಲಿ: ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದರೆ ನಾವು ವಿಪಕ್ಷ ಸ್ಥಾನದಲ್ಲಿ ಕೂರಲಿದ್ದೇವೆ ಎಂದು ಕರ್ನಾಟಕದ ಕಾಂಗ್ರೆಸ್ ಸಂಸದ ಸೈಯದ್ ನಾಸಿರ್ ಹುಸೇನ್ ಹೇಳಿದ್ದಾರೆ.

ಇಂದಿಲ್ಲಿ ಎಎನ್ಐಗೆ ಹೇಳಿಕೆ ನೀಡಿರುವ ಅವರು, "ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಮಂತ್ರಿಗಳು ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಎರಡು-ಮೂರು ದಿನಗಳಲ್ಲಿ ನೂತನ ಸಚಿವ ಸಂಪುಟ ರಚನೆ ಆಗಲಿದೆ.  ಈ ಹಿಂದೆ ಇದ್ದ ಸಚಿವರು ನೂತನ ಸಂಪುಟದ ಭಾಗವಾಗುತ್ತಾರೋ ಇಲ್ಲವೋ ನನಗೆ ತಿಳಿದಿಲ್ಲ. ಇನ್ನೂ ನಾಲ್ಕು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರಲಿದೆ. ಒಂದು ವೇಳೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದಲ್ಲಿ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುತ್ತೇವೆ" ಎಂದು ಹುಸೇನ್ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿ (ಎಸ್) ಶಾಸಕರನ್ನು ಖರೀದಿಸಲು ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಹುಸೇನ್, "ಜೆಡಿಎಸ್ ಶಾಸಕರೊಬ್ಬರಿಗೆ ಬಿಜೆಪಿಗೆ ಸೇರಲು 40 ಕೋತಿ ರೂ. ಆಮಿಷ ಒಡ್ಡಲಾಗಿದೆ.  ಈಗಾಗಲೇ 10 ರಿಂದ 12 ಶಾಸಕರನ್ನು ಬಿಜೆಪಿ ಉಸ್ತುವಾರಿಯಲ್ಲಿ ಮುಂಬೈನ ಹೋಟೆಲ್ ನಲ್ಲಿ ಇರಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಯಬೇಕು ಎಂದು ಅವರು ಹೇಳಿದರು. 

Trending News