/kannada/photo-gallery/try-this-simple-trick-to-remove-cockroaches-in-every-corner-of-the-house-within-few-minutes-249320 ಮನೆಯ ಮೂಲೆ ಮೂಲೆಯಲ್ಲಿ ಅವಿತಿರುವ ಜಿರಳೆಗಳನ್ನು 5 ನಿಮಿಷದಲ್ಲಿ ಹೊರಹಹಾಕಲು ಸಿಂಪಲ್ ಟ್ರಿಕ್ ಮನೆಯ ಮೂಲೆ ಮೂಲೆಯಲ್ಲಿ ಅವಿತಿರುವ ಜಿರಳೆಗಳನ್ನು 5 ನಿಮಿಷದಲ್ಲಿ ಹೊರಹಹಾಕಲು ಸಿಂಪಲ್ ಟ್ರಿಕ್ 249320

ಕುಮಾರಸ್ವಾಮಿ NDAಯಿಂದ ಆಚೆ ಬಂದು ನನಗೆ ಬೆಂಬಲ ನೀಡುವ ಬಗ್ಗೆ ಮಾತನಾಡಲಿ: ಡಿಕೆಶಿ ತಿರುಗೇಟು

ನಮಗೂ ಎನ್‌ಡಿಎಗೂ ಸಂಬಂಧವಿಲ್ಲ. ಅದರಿಂದ ಹೊರ ಬಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ನನಗೆ ಬಂಬಲೆ ನೀಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಹೇಳಿದ್ದಾರೆ.

Written by - Prashobh Devanahalli | Edited by - Krishna N K | Last Updated : Nov 4, 2023, 05:46 PM IST
  • ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ
  • ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿರುಗೇಟು
  • ನಮಗೂ ಎನ್‌ಡಿಎಗೂ ಸಂಬಂಧವಿಲ್ಲ. ಮೊದಲು ಅದರಿಂದ ಆಚೆ ಬಂದು ಮಾತನಾಡಲಿ ಎಂದ ಡಿಕೆಶಿ
ಕುಮಾರಸ್ವಾಮಿ NDAಯಿಂದ ಆಚೆ ಬಂದು ನನಗೆ ಬೆಂಬಲ ನೀಡುವ ಬಗ್ಗೆ ಮಾತನಾಡಲಿ: ಡಿಕೆಶಿ ತಿರುಗೇಟು title=

ಬೆಂಗಳೂರು : ಕುಮಾರಸ್ವಾಮಿ ಅವರು ಎನ್‌ಡಿಎ ಮೈತ್ರಿಕೂಟದವವರು. ನಮಗೂ ಎನ್‌ಡಿಎಗೂ ಸಂಬಂಧವಿಲ್ಲ. ಮೊದಲು ಅದರಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕುಮಾರಕೃಪಾ ಅತಿಥಿ ಗೃಹದ ಬಳಿ ಶನಿವಾರ ಕೇಳಿದಾಗ ಈ ರೀತಿ ಉತ್ತರಿಸಿದರು.

ಇದನ್ನೂ ಓದಿ: ಮಳೆ ಬರಲಿ- ರೈತರು, ಕೂಲಿ ಕಾರ್ಮಿಕರಿಗೆ ವಧು ಸಿಗಲೆಂದು ಯುವಕರ ಪಾದಯಾತ್ರೆ

ಕುಮಾರಸ್ವಾಮಿ ಅವರ ಮಾತು ಕೇಳಿ  ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ.  ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.