ಪಿಡಬ್ಲ್ಯೂಡಿ ಇಂಜಿನಿಯರ್ ಹಲ್ಲೆ ಪ್ರಕರಣ: ಕಾಂಗ್ರೆಸ್ ಶಾಸಕ ನಿತೇಶ್ ರಾಣೆಗೆ ಜಾಮೀನು

ಮಹಾರಾಷ್ಟ್ರದ ಸಿಂಧುದುರ್ಗ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದ್ದು, ಪ್ರತಿ ಭಾನುವಾರ ಕಂಕವ್ಲಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಹಾಗೂ ಮತ್ತೊಮ್ಮೆ ಇಂತಹ ಪ್ರಕರಣಗಳು ಮರುಕಳಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ. 

Last Updated : Jul 10, 2019, 07:15 PM IST
ಪಿಡಬ್ಲ್ಯೂಡಿ ಇಂಜಿನಿಯರ್ ಹಲ್ಲೆ ಪ್ರಕರಣ: ಕಾಂಗ್ರೆಸ್ ಶಾಸಕ ನಿತೇಶ್ ರಾಣೆಗೆ ಜಾಮೀನು title=

ಮುಂಬೈ: ಪಿಡಬ್ಲ್ಯೂಡಿ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಶಾಸಕ ನಿತೇಶ್ ರಾಣೆಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಹಾರಾಷ್ಟ್ರದ ಸಿಂಧುದುರ್ಗ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದ್ದು, ಪ್ರತಿ ಭಾನುವಾರ ಕಂಕವ್ಲಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಹಾಗೂ ಮತ್ತೊಮ್ಮೆ ಇಂತಹ ಪ್ರಕರಣಗಳು ಮರುಕಳಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ. 

ಮಹಾರಾಷ್ಟ್ರ-ಗೋವಾ ನಡುವಿನ ಕಂಕವ್ಲಿ ಹೆದ್ದಾರಿಯ ರಸ್ತೆ ವೀಕ್ಷಣೆಗೆ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಪುತ್ರ ನಿತೇಶ್ ನಾರಾಯಣ್ ರಾಣೆ ಜುಲೈ 4ರಂದು ತೆರಳಿದ್ದರು. ಈ ಸಂದರ್ಭದಲ್ಲಿ ನಿತೇಶ್ ರಾಣೆ ಮತ್ತು ಅವರ ಬೆಂಬಲಿಗರು ಇಂಜಿನಿಯರ್ ಮೇಲೆ ಹಲ್ಲೆ ನಡೆಸಿ ಮಣ್ಣು ಸುರಿದಿದ್ದರು. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಶಾಸಕ ನಿತೀಶ್ ರಾಣೆ ಮತ್ತು ಬೆಂಬಲಿಗರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
 
Trending News