ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಳ-ಸಿಎಂ ಸಿದ್ದರಾಮಯ್ಯ

2022 ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Manjunath N | Last Updated : Nov 6, 2023, 03:31 PM IST
  • ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ.
  • ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.
  • ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ.
ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಳ-ಸಿಎಂ ಸಿದ್ದರಾಮಯ್ಯ  title=

ಬೆಂಗಳೂರು: 2022 ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಮುಖ್ಯಾಂಶಗಳು:

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ.

ಇದನ್ನೂಓದಿ-ಕೆ‌ಪಿ‌ಎಸ್‌ಸಿ ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆಸಿದ್ದು ದುರ್ನಡತೆಯ ಪರಮಾವಧಿ: ಜೆಡಿಎಸ್

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ. ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ಇದನ್ನೂಓದಿ-Weather Update: ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ.. ಗುಡುಗು ಮಿಂಚಿನ ಆರ್ಭಟ!

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News