ಬೆಂಗಳೂರು : ರಾಜ್ಯ ಸರ್ಕಾರ ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
ಈ ಕುರಿತು ಹೆಚ್ಡಿಕೆ ತಮ್ಮ ಎಕ್ಸ್ ಖಾತೆಯಲ್ಲಿ, ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ.
ಇದನ್ನೂ ಓದಿ:ಫೈಲ್ ಗಾಗಿ ಆಫೀಸ್ ನಲ್ಲಿ ಕಿತ್ತಾಡಿದ ಜಿಲ್ಲಾ ಕಾರ್ಮಿಕ ಇಲಾಖಾಧಿಕಾರಿ!
'ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ' ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ.
ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ @INCKarnataka ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ.
*
'ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ… pic.twitter.com/dYGPiPIlch— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 9, 2023
ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ?
ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ!
ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ.
ಇದನ್ನೂ ಓದಿ:ವಿಮೆ ಹಣ ನಿರಾಕರಿಸಿದ ವಿಮಾ ಕಂಪನಿಗೆ ರೂ. 2 ಲಕ್ಷ 40 ಸಾವಿರ ದಂಡ
ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ #ATM ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ಕಿಡಿಕಾರಿರುವ ಮಾಜಿ ಸಿಎಂ ಹೆಚ್ಡಿಕೆ ವಿನಾಶಕಾಲೇ ವಿಪರೀತ ಬುದ್ಧಿ, ನಾಶಕಾಲೇ ವಿಪರೀತ ಆಸೆ, ರೈತದ್ರೋಹಿ ಕಾಂಗ್ರೆಸ್ ಸರಕಾರ ಎಂದು ಬರೆದುಕೊಂಡು ಟೀಕಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.