ನವದೆಹಲಿ: ಮೂವರು ಶಾಸಕರನ್ನು ಮಂತ್ರಿ ಸ್ಥಾನದಿಂದ ಕೈಬಿಟ್ಟ ಹಿನ್ನಲೆಯಲ್ಲಿ ಗೋವಾದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಗೋವಾ ಫಾರ್ವರ್ಡ್ ಪಕ್ಷವು ಹಿಂತೆಗೆದುಕೊಂಡಿದೆ. ಈಗ ಅದು ತನ್ನ ನಿರ್ಧಾರವನ್ನು ರಾಜ್ಯಪಾರಿಗೆ ತಿಳಿಸಿದೆ.
ರಾಜಕೀಯ ವ್ಯವಹಾರಗಳ ಸಮಿತಿ ಮತ್ತು ಗೋವಾ ಫಾರ್ವರ್ಡ್ ಪಕ್ಷದ ಶಾಸಕಾಂಗ ಪಕ್ಷವು ಇಂದು ಸಭೆ ಸೇರಿ ಡಾ. ಪ್ರಮೋದ್ ಸಾವಂತ್ ನೇತೃತ್ವದ ಭಾರತೀಯ ಜನತಾ ಪಕ್ಷ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಿತು ಎಂದು ಪಕ್ಷದ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.
ಗೋವಾದ 10 ಕಾಂಗ್ರೆಸ್ ಶಾಸಕರಲ್ಲಿ ಮೂವರು ಶನಿವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಮತ್ತು ಮಾಜಿ ಉಪ ಸ್ಪೀಕರ್ ಮೈಕೆಲ್ ಲೋಬೊ ಕೂಡ ಪ್ರಮಾಣವಚನ ಸ್ವೀಕರಿಸಿದರು.