ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ - ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ.
ಈ ವರ್ಷ ನನ್ನ ಮಗಳು "ಕಾಟೇರ" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾಳೆ. ನನಗೆ ತಾವು ನೀಡಿರುವ ಪ್ರೋತ್ಸಾಹ ನನ್ನ ಮಗಳಿಗೂ ನೀಡಿ ಎನ್ನುತ್ತಾರೆ ನಟಿ ಮಾಲಾಶ್ರೀ.
ಮಗಳ ಜೊತೆಗೆ ಫೋಟೊ ಶೂಟ್ ಮಾಡಿಸಿಕೊಂಡಿರುವುದು ಹೆಚ್ಚು ಖುಷಿಯಾಗಿದೆ.
ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್ ಮಾಡಿಸಿಕೊಂಡಿದ್ದೀನಿ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ.