Team India playing 11 : ಹಿಟ್ಮ್ಯಾನ್ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಅಜೇಯವಾಗಿ ಸೆಮಿಸ್ ಪ್ರವೇಶಿಸಿದೆ. ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೆಣೆಸಾಡಲಿದೆ. ನ್ಯೂಜಿಲೆಂಡ್ ಮತ್ತು ಭಾರತದ ನಡುವಿನ ಸೆಮಿಫೈನಲ್ ಪಂದ್ಯ ನವೆಂಬರ್ 15 ರಂದು ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದೀಗ ಭಾರತದ ಪರ ಯಾರೆಲ್ಲ ಸೆಮಿಫೈನಲ್ನಲ್ಲಿ ಆಡಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಸೆಮಿಫೈನಲ್ ಪಂದ್ಯದಲ್ಲಿ ಈ ಇಬ್ಬರು ಆಟಗಾರರನ್ನು ತಂಡದಿಂದ ಹೊರಗಿಟ್ಟಿದ್ದಾರೆ ಎನ್ನಲಾಗಿದೆ. ಹಾಗಾದರೆ ರೋಹಿತ್ ಶರ್ಮಾ ಯಾವ ಇಬ್ಬರು ಆಟಗಾರರನ್ನು ಹೊರಗಿಡಬಹುದು ಮತ್ತು ಸಂಭಾವ್ಯ ಪ್ಲೇಯಿಂಗ್ 11 ಹೇಗಿರಬಹುದೆಂದು ನೋಡೋಣ.
ಈ ಟೂರ್ನಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ಜವಾಬ್ದಾರಿ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದು, ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ. ಟೀಮ್ ಇಂಡಿಯಾ ಟ್ರೋಫಿ ಗೆಲ್ಲಲು ರೋಹಿತ್ ಶರ್ಮಾ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದೀಗ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ಗೆ ಅವರು ಇಬ್ಬರು ಆಟಗಾರರನ್ನು ಬದಲಿಸಿ, ಬಲಿಷ್ಠ ಪ್ಲೇಯಿಂಗ್ 11 ನೊಂದಿಗೆ ಕಣಕ್ಕಿಳಿಯುವ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ಲೇಯಿಂಗ್ 11 ರಲ್ಲಿ, ಅವರು ಸೂರ್ಯಕುಮಾರ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಕೈ ಬಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಮಧ್ಯರಾತ್ರಿ ಯಾರಿಗೂ ತಿಳಿಯಂದಂತೆ ರಸ್ತೆ ಬದಿ ಮಲಗಿದ್ದವರಿಗೆ ಗರಿ ಗರಿ ನೋಟು ಹಚಿದ ಕ್ರಿಕೆಟರ್ ! ಇಲ್ಲಿದೆ ವಿಡಿಯೋ
ಅವರ ಜಾಗದಲ್ಲಿ ಇಶಾನ್ ಕಿಶನ್ ಹಾಗೂ ಆರ್.ಅಶ್ವಿನ್ ಅವರಿಗೆ ಅವಕಾಶ ನೀಡಲಾಗುತ್ತಿದೆ ಎನ್ನಲಾಗ್ತಿದೆ. 2019 ರ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ನ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದಕ್ಕೆ ಈ ಬಾರಿ ಪ್ರತ್ಯುತ್ತರ ನೀಡಲು ರೋಹಿತ್ ಶರ್ಮಾ ಸಿದ್ಧತೆ ನಡೆಸಿದ್ದಾರೆ. ಇದರಿಂದಾಗಿ ತಂಡದ ಮೇಲೆ ಹೆಚ್ಚಿನ ಒತ್ತಡವಿದೆ.
ಮಾಧ್ಯಮ ವರದಿ ಪ್ರಕಾರ, ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್ಮೆಂಟ್ನೊಂದಿಗೆ ಮೊಹಮ್ಮದ್ ಸಿರಾಜ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಪ್ಲೇಯಿಂಗ್ 11 ರಿಂದ ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಮತ್ತು ಆರ್ ಅಶ್ವಿನ್ ಅವಕಾಶ ಪಡೆಯಲಿದ್ದಾರೆ.
ವಾಂಖೆಡೆ ಪಿಚ್ನಲ್ಲಿ ಸ್ಪಿನ್ ಬೌಲರ್ ಗಳು ಕಮಾಲ್ ಮಾಡಬಹುದು. ಈ ಪಿಚ್ಚ ಸ್ಪಿನ್ಗೆ ಪೂರಕವಾಗಿದೆ. ಹೀಗಾಗಿ ಮೊಹಮ್ಮದ್ ಸಿರಾಜ್ ಬದಲಿಗೆ ಅಶ್ವಿನ್ ಆಡುವುದು ಹೆಚ್ಚು ಪ್ರಯೋಜನಕಾರಿಯಾಗಬಹುದು. ಇನ್ನೂ ಸೂರ್ಯ ಕುಮಾರ್ ಯಾದವ್ ಹೇಳಿಕೊಳ್ಳವಂತಹ ಯಾವುದೇ ಇನ್ನಿಂಗ್ಸ್ ಆಡದಿರುವುದು ಅವರನ್ನು ತಂಡದಿಂದ ಹೊರಗಿಡಲು ಕಾರಣವಾಗಬಹುದು ಎನ್ನಲಾಗಿದೆ. ಯಾದವ್ ಬದಲು ಇಶಾನ್ ಕಿಶನ್ ಪ್ಲೇಯಿಂಗ್ 11 ರಲ್ಲಿ ಸ್ಥಾನ ಪಡೆಯಬಹುದು.
ಇದನ್ನೂ ಓದಿ : ಭಾರತ OR ನ್ಯೂಜಿಲೆಂಡ್.. ಸೆಮಿಫೈನಲ್ನಲ್ಲಿ ಗೆಲುವು ಇವರದ್ಧೇ! ಜ್ಯೋತಿಷಿಗಳ ಭವಿಷ್ಯ ನಿಜವಾಗುತ್ತಾ?
ಭಾರತದ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಇಶಾನ್ ಕಿಶನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಆರ್ ಅಶ್ವಿನ್ ಮತ್ತು ಕುಲದೀಪ್ ಯಾದವ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.