Kaiva Movie and Gangaram Building: ಸ್ಯಾಂಡಲ್‌ವುಡ್ ಶೋಕ್ದಾರ್ ನಟ ಧನ್ವೀರ್ ಮತ್ತು ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ನಟಿ ಮೇಘಾ ಶೆಟ್ಟಿ ಅಭಿನಯಿಸಿರುವ 'ಕೈವ' ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸದ್ಯ ಈ ಚಿತ್ರದ ವಿಶೇಷವೆಂದರೆ, ಇದು 1983ರಲ್ಲಿ ಬೆಂಗಳೂರಿನ ತಿಗಳರಪೇಟೆಯಲ್ಲಿ ನಡೆದ ನೈಜಘಟನೆಯನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಹಾಗೆಯೇ, ಗಂಗಾರಾಮ್ ಕಟ್ಟಡ ಕುಸಿತದ ಘಟನೆಯ ಬಗ್ಗೆಯೂ ಈ ಚಿತ್ರದಲ್ಲಿ ಕನೆಕ್ಷನ್ ಇದೆಯಂತೆ.
ನಿರ್ದೇಶಕ ಜಯತೀರ್ಥ "ಕೈವ ಎಂಬುದು ಓರ್ವ ವ್ಯಕ್ತಿಯ ಹೆಸರಾಗಿದ್ದು, ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ 'ಕೈವ' ಸಿನಿಮಾದ ಪ್ರಮುಖ ಕಥಾವಸ್ತು. ಶವಾಗಾರದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರಿಂದ ನನಗೆ ಈ ಕಥೆ ಸಿಕ್ಕಿದ್ದಿ, ಬಳಿಕ ತಿಗಳರಪೇಟೆಗೆ ಹೋಗಿ ಅಲ್ಲಿ, ಆ ಘಟನೆ ಬಗ್ಗೆ ಕೂಲಂಕಷವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಅಲ್ಲಿ ವಾಸಿಸುತ್ತಿದ್ದಾರೆ. 1983ರಲ್ಲಿ ನಡೆದ ಗಂಗಾರಾಮ್ ಕಟ್ಟಡ ಕುಸಿತದ ದುರಂತಕ್ಕೂ ಹಾಗೂ ನಮ್ಮ ಚಿತ್ರದ ಕಥೆಗೂ ಸಂಬಂಧವಿದೆ' ಎಂದಿದ್ದಾರೆ.
ಇದನ್ನು ಓದಿ: ದೀಪಾವಳಿ ಹಬ್ಬದ ದಿನ "ಬ್ಯಾಡ್ ಮ್ಯಾನರ್ಸ್" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಮೈಸೂರಿನಲ್ಲಿ ಸುಮಾರು ನಲವತ್ತೆಂಟು ದಿನಗಳ ಶೂಟಿಂಗ್ ಮಾಡಲಾಗಿದ್ದು ಜೊತೆಗೆ ಬೆಂಗಳೂರಿನ ತಿಗಳರಪೇಟೆಯಲ್ಲೂ ಚಿತ್ರೀಕರಣ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಈ ಚಿತ್ರವನ್ನು ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕೆಯಿದ್ದು, ಅಜನೀಶ್ ಲೋಕನಾಥ್ ಈ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿ ಮತ್ತೆ ಶ್ವೇತಪ್ರಿಯ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.
ರವೀಂದ್ರಕುಮಾರ್ ನಿರ್ಮಾಣ ಮಾಡಿರುವ ಈ ಚಿತ್ರದ ಆಕ್ಷನ್ ಟೀಸರನ್ನು ದೀಪಾವಳಿ ಹಬ್ಬದ ಪ್ರಯುಕ್ತ ಅಭಿಷೇಕ್ ಅಂಬರೀಶ್ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ರಿಲೀಸ್ ಮಾಡಿದ್ದಾರೆ. ಧನ್ವೀರ್, ಮೇಘಾ ಶೆಟ್ಟಿ ಜೊತೆಗೆ ನಿರ್ದೇಶಕ ದಿನಕರ್ ತೂಗುದೀಪ್ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿ, ಹಾಗೆಯೇ ರಾಘು ಶಿವಮೊಗ್ಗ ಸೇರಿದಂತೆ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.