White Hair Remedies: ಬದಲಾದ ಜೀವನಶೈಲಿಯಿಂದಾಗಿ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲ ಸಮಸ್ಯೆ ಬಹಳಷ್ಟು ಮಂದಿಯನ್ನು ಕಾಡುತ್ತದೆ. ಇದರಿಂದ ಪರಿಹಾರಕ್ಕಾಗಿ ಮಾರುಕಟ್ಟೆಯಲ್ಲಿ ಹಲವು ಹೇರ್ ಡೈಗಳು ಲಭ್ಯವಿವೆ. ಆದರೆ, ನೀವು ಕೇವಲ 2 ರೂಪಾಯಿ ಖರ್ಚು ಮಾಡಿ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರಸ್ತುತ, ವೇಗದ ಜೀವನಶೈಲಿಯಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವುದು ಸರ್ವೇ ಸಾಮಾನ್ಯವಾಗಿದೆ.
ಬಿಳಿ ಕೂದಲಿಗೆ ನಮ್ಮ ಬದಲಾದ ಜೀವನಶೈಲಿ, ಆಹಾರ ಪದ್ದತಿ ಸೇರಿದಂತೆ ಹಲವು ಕಾರಣಗಳಿರಬಹುದು.
ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ನಾನಾ ಬಗೆಯ ಹೇರ್ ಡೈಗಳು ಲಭ್ಯವಿವೆ.
ಆದರೆ, ಮಾರುಕಟ್ಟೆಯಲ್ಲಿ ಸಿಗುವ ಕೆಲವು ಹೇರ್ ಡೈಗಳ ಬಳಕೆಯಿಂದ ಬಣ್ಣ ಕೂದಲಿಗೆ ಮಾತ್ರವಲ್ಲದೆ ಬುಡಕ್ಕೂ ಅಂಟಿಕೊಳ್ಳಬಹುದು. ಇದಲ್ಲದೆ, ಈ ಹೇರ್ ಡೈಗಳಲ್ಲಿ ಬಳಸುವ ಅಮೋನಿಯಾದ ಪರಿಣಾಮವಾಗಿ ದೃಷ್ಟಿ ದೋಷ, ಅಲ್ಲದೆ, ಚರ್ಮದ ತುರಿಕೆ ಸೇರಿದಂತೆ ಹಲವು ಸಮಸ್ಯೆಗಳಿಗೂ ಕಾರಣವಾಗಬಹುದು.
ಹೇರ್ ಡೈ ರೀತಿಯ ಸೈಡ್ ಎಫೆಕ್ಟ್ಸ್ ಇಲ್ಲದೆಯೇ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಕೆಲವು ಮನೆ ಮದ್ದುಗಳು ಕೂಡ ಪ್ರಯೋಜನಕಾರಿ ಆಗಿವೆ.
ನೀವು ಕೇವಲ ಎರಡೇ ಎರಡು ರೂಪಾಯಿ ಖರ್ಚು ಮಾಡುವ ಮೂಲಕ ನಿಮ್ಮ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
ನಿಮ್ಮ ಕೂದಲನ್ನು ಕಪ್ಪಾಗಿಸಲು ಮೊದಲು 2 ರೂ. ಇಂಸ್ಟೆಂಟ್ ಕಾಫಿ ಪುಡಿಯನ್ನು ತೆಗೆದುಕೊಂಡು ಅದರಲ್ಲಿ ಕಾಲು ಚಮಚದಷ್ಟು ಕೊಬ್ಬರಿ ಎಣ್ಣೆ ಮತ್ತು ಒಂದು ಚಮಚ ಅಲೋವೆರಾ ಜೆಲ್ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ.
ಕಾಫಿ ಪುಡಿ, ಕೊಬ್ಬರಿ ಎಣ್ಣೆ, ಅಲೋವೆರಾ ಮಿಶ್ರಣವನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ. ವಾರದಲ್ಲಿ ಒಂದೆರಡು ಬಾರಿ ಈ ಇಂಸ್ಟೆಂಟ್ ಹೇರ್ ಡೈ ಅನ್ನು ಬಳಸುವುದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲದೆ ಕೂದಲನ್ನು ಕಪ್ಪಾಗಿಸಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.