ಬಾಲಿವುಡ್‌ ಕಿಂಗ್‌ ಖಾನ್‌ ಅಭಿನಯದ ಡಂಕಿ ಫಸ್ಟ್‌ ಸಾಂಗ್‌ಗೆ ಡೇಟ್‌ ಫಿಕ್ಸ್!

Dunki: ಬಾಲಿವುಡ್‌ ಕಿಂಗ್‌ ಖಾನ್‌ ನಟ ಶಾರುಖ್‌ ಖಾನ್‌ ಅಭಿನಯದ ಡಂಕಿ ಸಿನಿಮಾದ ಮೊದಲ ಸಾಂಗ್‌ ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದ್ದು, ಈ ಹಾಡಿನ ಮೇಲೆ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದೆ.  

Written by - Zee Kannada News Desk | Last Updated : Nov 21, 2023, 01:02 PM IST
  • ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ.
  • ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ.
  • ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ.
ಬಾಲಿವುಡ್‌ ಕಿಂಗ್‌ ಖಾನ್‌ ಅಭಿನಯದ ಡಂಕಿ ಫಸ್ಟ್‌ ಸಾಂಗ್‌ಗೆ ಡೇಟ್‌ ಫಿಕ್ಸ್! title=

Dunki First Song Rlease Date: ಶಾರುಖ್‌ ಖಾನ್‌ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಈ ಚಿತ್ರದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ.

ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದು, ಹೇಗಿರಲಿದೆ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ. ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದು, ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನು ಓದಿ: IFFI Goa 2023: ಗೋವಾ ಫಿಲ್ಮ್‌ ಫೆಸ್ಟ್‌ನಲ್ಲಿ ಮಾಧುರಿ ದೀಕ್ಷಿತ್ ಗೆ ವಿಶೇಷ ಗೌರವ

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದು, ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News