/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ...ನಟ‌ರಾಕ್ಷಸ   ಡಾಲಿ ಧನಂಜಯ್ ಲಿಡ್ಕರ್ ಗೆ  ರಾಯಭಾರಿಯಾಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ. 

ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ.

ಇದನ್ನೂ ಓದಿ: ಸುಖಕರ ದಾಂಪತ್ಯ ಜೀವನಕ್ಕೆ ಪತಿಪತ್ನಿಯರು ನಿತ್ಯ ಈ ಕೆಲಸ ಮಾಡಲೇಬೇಕು!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ 

ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ 'ಟಗರು ಪಲ್ಯ' ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ  ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ .

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Section: 
English Title: 
actor Daali Dhananjay become Lidkar ambassador
News Source: 
Home Title: 

ಮೊಟ್ಟ ಮೊದಲ ಬಾರಿಗೆ ಲಿಡ್ಕರ್ ಗೆ ಬ್ರ್ಯಾಂಡ್ ಅಂಬಾಸಿಡರ್ ಆದ ಡಾಲಿ ಧನಂಜಯ

 ಮೊಟ್ಟ ಮೊದಲ ಬಾರಿಗೆ ಲಿಡ್ಕರ್ ಗೆ ಬ್ರ್ಯಾಂಡ್ ಅಂಬಾಸಿಡರ್ ಆದ ಡಾಲಿ ಧನಂಜಯ
Yes
Is Blog?: 
No
Tags: 
Facebook Instant Article: 
Yes
Highlights: 

'ಲಿಡ್ಕರ್‌'ಗೆ ಡಾಲಿ  ಧನಂಜಯ ರಾಯಭಾರಿ 

ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಡಾಲಿ ಸಾಥ್: ಲಿಡ್ಕರ್ ರಾಯಭಾರಿಯಾದ ಧನಂಜಯ

ಮೊಟ್ಟ ಮೊದಲ ಬಾರಿಗೆ ಲಿಡ್ಕರ್ ಗೆ ಬ್ರ್ಯಾಂಡ್ ಅಂಬಾಸಿಡರ್ ಆದ ಡಾಲಿ ಧನಂಜಯ

Mobile Title: 
ಮೊಟ್ಟ ಮೊದಲ ಬಾರಿಗೆ ಲಿಡ್ಕರ್ ಗೆ ಬ್ರ್ಯಾಂಡ್ ಅಂಬಾಸಿಡರ್ ಆದ ಡಾಲಿ ಧನಂಜಯ
Manjunath N
YASHODHA POOJARI
Publish Later: 
No
Publish At: 
Thursday, November 23, 2023 - 11:40
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No
Word Count: 
225