150 ದಿನಗಳ ಉದ್ಯೋಗ ನೀಡಲು ಕೇಂದ್ರವಿನ್ನೂ ಒಪ್ಪಿಗೆ ಸೂಚಿಸಿಲ್ಲ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

Written by - Yashaswini V | Last Updated : Nov 29, 2023, 03:13 PM IST
  • ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ.
  • ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ.
  • ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ.
150 ದಿನಗಳ ಉದ್ಯೋಗ ನೀಡಲು ಕೇಂದ್ರವಿನ್ನೂ ಒಪ್ಪಿಗೆ ಸೂಚಿಸಿಲ್ಲ: ಸಿಎಂ ಸಿದ್ದರಾಮಯ್ಯ  title=

ಎನ್ ಆರ್ ಜಿ ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವ ದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.  ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು. 

ಇದನ್ನೂ ಓದಿ- ಬಿಜೆಪಿ 'ಸೋಮನಹಳ್ಳಿ ಮುದುಕಿ ಕಥೆ' ಆಗಿದೆ: ಡಿ.6ರ ನಂತರ ಎಲ್ಲವನ್ನೂ ಹೇಳುತ್ತೇನೆ: ವಿ.ಸೋಮಣ್ಣ

ರಾಜ್ಯದ ದುಡ್ಡು ರಾಜ್ಯಕ್ಕೆ ನೀಡುತ್ತಿಲ್ಲ:
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ದೂರಿದರು. 

ಇದನ್ನೂ ಓದಿ- ವಿದ್ಯಾರ್ಥಿಗಳ ಪ್ರವಾಸಕ್ಕೂ ಕಾಂಗ್ರೆಸ್ ಸರ್ಕಾರದಿಂದ ಕೊಕ್ಕೆ: ಬಿಜೆಪಿ ಆಕ್ರೋಶ

ವಕೀಲನಾಗಿರುವುದರಿಂದಲೇ  ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್ :
ಕುಮಾರಸ್ವಾಮಿಯವರು ವಕೀಲರಾಗಿದ್ದ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ತನಿಖೆಯ ಆದೇಶವನ್ನು ವಾಪಸ್ಸು ಪಡೆದಿರುವುದು ಸರಿಯೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ವಕೀಲನಾಗಿರುವುದರಿಂದ,  ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿಸುತ್ತಿದ್ದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

  

Trending News