ಬೆಂಗಳೂರು: ಪ್ರಸ್ತುತ, ಹೆಚ್ಚಿನ ಬಹುತೇಕ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ವಾಸ್ತವದಲ್ಲಿ, ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿ ಕಂಡುಬರುವ ಮೇಣದಂತಹ ಒಂದು ಪದಾರ್ಥವಾಗಿದೆ, ಇದು ದೇಹದಲ್ಲಿನ ಆರೋಗ್ಯಕರ ಜೀವಕೋಶಗಳಿಗೆ ಅವಶ್ಯಕವಾಗಿದೆ. ಆದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದಾಗ ಅದು ರಕ್ತನಾಳಗಳಲ್ಲಿ ಶೇಖರಣೆಯಾಗಲು ಆರಂಭಿಸಿ ರಕ್ತದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಹೃದಯಾಘಾತ, ಪಾರ್ಶ್ವವಾಯು ಮತ್ತು ಹೃದಯ ವೈಫಲ್ಯದಂತಹ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ದೇಹದಲ್ಲಿ ಹೆಚ್ಚುತ್ತಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳುವುದು ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದು ಬಹಳ ಮುಖ್ಯ. ಇದಲ್ಲದೆ, ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾದ ಅನೇಕ ಮನೆಮದ್ದುಗಳಿವೆ. ಅಂತಹ ಒಂದು ಪರಿಣಾಮಕಾರಿ ಮನೆಮದ್ದು ಎಂದರೆ ಅದು ಬೆಳ್ಳುಳ್ಳಿ, ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಹಾಗಾದರೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬೆಳ್ಳುಳ್ಳಿಯನ್ನು ಯಾವ ವಿಧಗಳಲ್ಲಿ ಸೇವೆಸಬೇಕು ತಿಳಿದುಕೊಳ್ಳೋಣ ಬನ್ನಿ (Health News In Kannada)
ಬೆಳ್ಳುಳ್ಳಿಯ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಅನೇಕ ಪೋಷಕಾಂಶಗಳಿವೆ, ಇದು ದೇಹದ ಅನೇಕ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದರಲ್ಲಿ ಅಲಿಸಿನ್ ಎಂಬ ಅಂಶವಿದ್ದು, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇದಲ್ಲದೆ ಬೆಳ್ಳುಳ್ಳಿಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್, ಆ್ಯಂಟಿ ವೈರಲ್, ಆ್ಯಂಟಿ ಫಂಗಲ್ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳಿದ್ದು, ಅದು ಅಧಿಕ ರಕ್ತದ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಎನ್ಸಿಬಿಐ ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಪ್ರತಿದಿನ 1 ಬೆಳ್ಳುಳ್ಳಿ ಕುಡಿಯನ್ನು ಸೇವಿಸುವುದರಿಂದ ದೇಹದಲ್ಲಿ ಎಲ್ಡಿಎಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹಸಿ ಬೆಳ್ಳುಳ್ಳಿ ತಿನ್ನಿ
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 2 ಎಸಳು ಬೆಳ್ಳುಳ್ಳಿಯನ್ನು ಒಂದು ಲೋಟ ನೀರಿನೊಂದಿಗೆ ತಿನ್ನುವುದು ತುಂಬಾ ಪ್ರಯೋಜನಕಾರಿಯಾಗಿದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಇದು ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ.
ಬೆಳ್ಳುಳ್ಳಿ ಮತ್ತು ಜೇನುತುಪ್ಪ
ಬೆಳ್ಳುಳ್ಳಿ ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಿಸುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಇದನ್ನು ಮಾಡಲು, ಬೆಳ್ಳುಳ್ಳಿಯನ್ನು ಪೇಸ್ಟ್ ಮಾಡಿ. ನಂತರ ಅದಕ್ಕೆ ಸ್ವಲ್ಪ ಜೇನುತುಪ್ಪ ಬೆರೆಸಿ ತಿನ್ನಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಮಿಶ್ರಣವನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅಸಿಡಿಟಿ ಸಮಸ್ಯೆಯನ್ನೂ ಹೋಗಲಾಡಿಸಬಹುದು.
ಹುರಿದ ಬೆಳ್ಳುಳ್ಳಿ
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಹುರಿದ ಬೆಳ್ಳುಳ್ಳಿಯನ್ನು ಸೇವಿಸಬಹುದು. ಇದಕ್ಕಾಗಿ, 1-2 ಬೆಳ್ಳುಳ್ಳಿ ಎಸಳುಗಳನ್ನು ಫ್ರೈ ಮಾಡಿ ಮತ್ತು ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಿರಿ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಕೂಡ ಪರಿಹಾರವನ್ನು ನೀಡುತ್ತದೆ.
ಇದನ್ನೂ ಓದಿ-ಬೆಳ್ಳಗಾಗುತ್ತಿರುವ ಕೂದಲುಗಳನ್ನು ಕಪ್ಪಾಗಿಸಲು ಸಾಸಿವೆ ಎಣ್ಣೆಯಲ್ಲಿ ಈ 3 ಪದಾರ್ಥ ಬೆರೆಸಿ ತಲೆಗೆ ಹಚ್ಚಿಕೊಳ್ಳಿ!
ಬೆಳ್ಳುಳ್ಳಿ ಮತ್ತು ನಿಂಬೆ
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು, ನೀವು ಬೆಳ್ಳುಳ್ಳಿ ಮತ್ತು ನಿಂಬೆ ಸೇವಿಸಬಹುದು. ಇದನ್ನು ಮಾಡಲು, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ಬೆಳ್ಳುಳ್ಳಿ ಮತ್ತು ನಿಂಬೆ ರಸವನ್ನು ಕುಡಿಯಿರಿ. ಇದು ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-ತೂಕ ಇಳಿಕೆಗೆ ಈ ನೀರು ವರದಾನಕ್ಕೆ ಸಮಾನ, ಯಾವಾಗ-ಯಾವ ರೀತಿ ಸೇವಿಸಬೇಕು ಇಲ್ಲಿ ತಿಳಿಯಿರಿ!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ