ಬೆಂಗಳೂರು: ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.
‘ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು’ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.
ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ…
— CM of Karnataka (@CMofKarnataka) December 2, 2023
‘ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿಯೇ ಸೂಕ್ತ ತನಿಖೆ ನಡೆದು, ಎಲ್ಲಾ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಏನಿದು ಹಗರಣ..?
ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಯಿಂದ ಸಾವಿರಾರು ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್ ಸುಳ್ಳು ಸಾಲಗಾರರ ಖಾತೆ ತೆರದು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದೆ.
2022ರ ಫೆಬ್ರವರಿ ತಿಂಗಳಿನಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ಅಧಿಕಾರಿಯೊಬ್ಬರನ್ನು ಅಕ್ರಮ ಹಣ ವರ್ಗಾವಣೆ ಆರೋಪಡಿ ಜಾರಿ ನಿರ್ದೇಶನಾಲಯ(Enforcement Directorate - ED) ಬಂಧಿಸಿತು. ಪ್ರಕರಣ ಸಂಬಂಧ ಇದುವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣಅವರು ಸಿಬಿಐಗೆ ಈ ಹಗರಣದ ತನಿಖೆಯನ್ನು ಒಪ್ಪಿಸುವುದಾಗಿ ಈ ಹಿಂದೆ ಹೇಳಿದ್ದರು.
ಇದನ್ನೂ ಓದಿ: ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.