ಕಾಡಾನೆ ಜೊತೆ ಕಾಳಗದಲ್ಲಿ ಪ್ರಾಣ‌ಬಿಟ್ಟ 'ಅರ್ಜುನ'.. ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಗಜರಾಯ!

Arjuna elephant Death News: ಪುಂಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

Written by - Chetana Devarmani | Last Updated : Dec 4, 2023, 04:20 PM IST
  • ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ
  • ಕಾಡಾನೆ ದಾಳಿಗೆ ಪ್ರಾಣ ಬಿಟ್ಟ 'ಅರ್ಜುನ'
  • ಪುಂಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ
ಕಾಡಾನೆ ಜೊತೆ ಕಾಳಗದಲ್ಲಿ ಪ್ರಾಣ‌ಬಿಟ್ಟ 'ಅರ್ಜುನ'.. ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಗಜರಾಯ!  title=
Arjuna elephant

ಹಾಸನ : ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಪ್ರಾಣ ಬಿಟ್ಟಿದೆ. ಪುಂಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಇಂದು ನಾಲ್ಕು ಸಾಕಾನೆಗಳೊಂದಿಗೆ   ಅರಣ್ಯ ಇಲಾಖೆ ಸಿಬ್ಬಂದಿ ಹಾಗು ವೈದ್ಯರು  ಕಾರ್ಯಾಚರಣೆ ಆರಂಭಿಸಿದ್ದರು. ಪುಂಡಾನೆಯನ್ನು ಸೆರೆಹಿಡಿಯಲು  ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಿಢೀರ್ ದಾಳಿ ಮಾಡಿದೆ. 

ಇದನ್ನೂ ಓದಿ: ಮಾದಪ್ಪನ ಹರಕೆ ತೀರಿಸಲು ಕುರಿಗಳ ಜೊತೆ ಬಂದ ರೈತ!! ಕುರಿಗಳಿಂದ ಪ್ರದಕ್ಷಿಣೆ 

ಒಂಟಿಸಲಗ ದಾಳಿ ಮಾಡುತ್ತಿದ್ದಂತೆ  ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಈ ವೇಳೆ ಒಂಟಿಸಲಗದ ಜೊತೆ ಅರ್ಜುನ  ಕಾಳಗಕ್ಕೆ ಇಳಿದಿದೆ. ಎರಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ನಿಯಂತ್ರಿಸಲಾಗದೆ ಮಾವುತ ಇಳಿದು ಓಡಿದ್ದಾನೆ.  ಕಾಳಗದಲ್ಲಿ ಅರ್ಜುನ ದಾರುಣವಾಗಿ ಸಾವನ್ನಪ್ಪಿದೆ.

ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅರ್ಜುನ, ಸೌಮ್ಯ ಸ್ವಾಭಾವದಿದಲೇ ಎಲ್ಲರ ಪ್ರೀತಿ ಗಳಿಸಿದ್ದ. ಅರ್ಜುನನ ಸಾವು ದುಃಖ ತರಿಸಿದೆ.

ಇದನ್ನೂ ಓದಿ: ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಬಿಜೆಪಿ ಸಂಸದರಿಗೆ ಇಲ್ಲವೇ? -ರಮೇಶ್ ಬಾಬು  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News