ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ..    

Written by - Savita M B | Last Updated : Dec 10, 2023, 12:31 PM IST
  • ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು
  • ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆಮಾಡಲಾಯಿತು
ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು: ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ-ಮಿಚುವಾಂಗ್ ಚಂಡಮಾರುತ ಎಫೆಕ್ಟ್ ! ಸಂಪೂರ್ಣ ಮುಳುಗಿದ ಚೆನ್ನೈ ! ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ !

ಎಸ್. ನಿಜಲಿಂಗಪ್ಪನವರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. 

ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಾಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಇದನ್ನೂ ಓದಿ-ಇನ್ನೋವಾ-ಇಟಿಯಾಸ್ ಚಾಲಕನ ಮಧ್ಯೆ ಮಾರಾಮಾರಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News