ಬೆಂಗಳೂರು: ದೋಸ್ತಿ ಸರ್ಕಾರದ ಪತನದ ಹಿನ್ನೆಲೆಯಲ್ಲಿ ಮುಜಾಗ್ರತಾ ಕ್ರಮವಾಗಿ ಬೆಂಗಳೂರು ನಗರಾದ್ಯಂತ ಹೇರಲಾಗಿದ್ದ 2 ದಿನಗಳ ಮದ್ಯ ಮಾರಾಟ ನಿಷೇಧ ಆದೇಶವನ್ನು ಬಹಿಂಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೋಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಯಿಂದಾಗಿ ಬೆಂಗಳೂರು ನಗರಾದ್ಯಂತ ಮಂಗಳವಾರ ಸಂಜೆ 6 ಗಂಟೆಯಿಂದ ಮತ್ತು ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಅಲ್ಲದೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ನಗರಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಆಲೋಕ್ ಕುಮಾರ್ ಅವರು ನಿಷೇಧವನ್ನು ಹಿಂಪಡೆದಿದ್ದಾರೆ.
ಆದರೆ, ನಾಳೆ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಪೋಲಿಸ್ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.