ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..?

Bhajan Lal Sharma : ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸದೆ ಚುನಾವಣೆಗೆ ಸ್ಪರ್ಧಿಸಿತ್ತು. ರಾಜಸ್ಥಾನದ 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಿಜೆಪಿ 115 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲು ಪ್ರಚಂಡ ಬಹುಮತ ಗಳಿಸಿತು. ಇದೀಗ ನೂತನ ಮುಖ್ಯಮಂತ್ರಿ ಹೆಸರು ಘೋಷಿಸಿದೆ.

Written by - Krishna N K | Last Updated : Dec 12, 2023, 06:11 PM IST
  • ರಾಜಸ್ಥಾನ ಮುಂದಿನ ಮುಖ್ಯಮಂತ್ರಿ ಹೆಸರು ಘೋಷಿಸಿದ ಬಿಜೆಪಿ.
  • ಭಜನ್ ಲಾಲ್ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿ.
  • ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಭಜನ್ ಲಾಲ್ ಶರ್ಮಾ.
ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..? title=

Rajasthan CM : ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಭಜನ್ ಲಾಲ್ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಇದರಿಂದಾಗಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟ ಅಂತ್ಯಗೊಂಡಿದೆ.

ರಾಜಸ್ಥಾನದ ಭರತ್‌ಪುರದಲ್ಲಿ ನೆಲೆಸಿರುವ ಭಜನ್ ಲಾಲ್ ಶರ್ಮಾ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಭಜನ್ ಲಾಲ್ ಶರ್ಮಾ ಅವರು 4 ಬಾರಿ ರಾಜ್ಯ ಬಿಜಿಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಆರ್‌ಎಸ್‌ಎಸ್ ಮತ್ತು ಎಬಿವಿಪಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ.

ಇದನ್ನೂ ಓದಿ: Article 370 SC Verdict: ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಸಂಗನಾರ್ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದೇ ಹೇಳಬಹುದು. ಆ ಕ್ಷೇತ್ರದಲ್ಲಿ ಭಜನ್ ಲಾಲ್ ಶರ್ಮಾ ಗೆದ್ದರು. ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ 56 ವರ್ಷದ ಶರ್ಮಾ ಸ್ನಾತಕೋತ್ತರ ಪದವೀಧರರು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಒಟ್ಟು ಘೋಷಿತ ಆಸ್ತಿ 1.5 ಕೋಟಿ ರೂಪಾಯಿಗಳಾಗಿದ್ದು, ಇದರಲ್ಲಿ 43.6 ಲಕ್ಷ ರೂಪಾಯಿ ಮೌಲ್ಯದ ಚರ ಆಸ್ತಿ ಮತ್ತು 1 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳು ಸೇರಿವೆ. ಆದಾಯ 11.1 ಲಕ್ಷ, ಅದರಲ್ಲಿ 6.9 ಲಕ್ಷ ಸ್ವಂತ ಆದಾಯ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟ್ಯಾಕ್ಸಿ ಡ್ರೈವರ್‌ ಹಾಗೂ ಮಹಿಳೆಯ ಗಲಾಟೆಯ ವಿಡಿಯೋ ವೈರಲ್:‌ 5 ರೂ. ಹೆಚ್ಚು ಡಿಮ್ಯಾಂಡ್‌ ಮಾಡಿದ ಕಾರ್‌ ಚಾಲಕ!

ಭಾರತೀಯ ಜನತಾ ಪಕ್ಷವು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಹೆಸರನ್ನು ಪ್ರಕಟಿಸಿದೆ. ಮೋಹನ್ ಯಾದವ್ ಅವರಿಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನ ಮತ್ತು ವಿಷ್ಣು ದೇವ್ ಸಾಯಿಗೆ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ, ಭಜನ್‌ಲಾಲ್‌ ಶರ್ಮಾ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಘೋಷಿಸಿದೆ. 

ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸದೆ ಚುನಾವಣೆಗೆ ಸ್ಪರ್ಧಿಸಿತ್ತು. ರಾಜಸ್ಥಾನದ 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಿಜೆಪಿ 115 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲು ಪ್ರಚಂಡ ಬಹುಮತ ಗಳಿಸಿತು. ಕಾಂಗ್ರೆಸ್ 69 ಸ್ಥಾನಗಳನ್ನು ಗೆದ್ದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News