ಕೆಲವೇ ಗಂಟೆಗಳಲ್ಲಿ ಬುದ್ಧಿದಾತ ಬುಧನ ವಕ್ರ ನಡೆ ಆರಂಭ, ಧನ ಕುಬೇರ ಕೃಪೆಯಿಂದ ಈ ಜನರಿಗೆ ಐಶ್ವರ್ಯನಿಧಿ ಪ್ರಾಪ್ತಿ!

Budh Retrograde In Vruschik Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುದ್ಧಿದಾತ ಬುಧನ ವಕ್ರನಡೆ ವೃಶ್ಚಿಕ ರಾಶಿಯಲ್ಲಿ ಆರಂಭಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನಕುಬೇರ ಕೃಪೆಯಿಂದ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. (Spiritual News In Kannada)

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹ ಒಂದು ನಿಶ್ಚಿತ ಕಾಲಾಂತರದಲ್ಲಿ ನೇರ ಹಾಗೂ ವಕ್ರನಡೆಯನ್ನು ಅನುಸರಿಸುತ್ತವೆ ಮತ್ತು ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನು ಬೀರುತ್ತವೆ. ಪ್ರಸ್ತುತ ಕೆಲವೇ ಗಂಟೆಗಳಲ್ಲಿ ಗ್ರಹಗಳ ರಾಜಕುಮಾರ ಹಾಗೂ ಬುದ್ಧಿದಾತ ಬುಧ ವೃಶ್ಚಿಕ ರಾಶಿಯಲ್ಲಿ ತನ್ನ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಇದರ ಪ್ರಭಾವ ದ್ವಾದಶ ರಾಶಿಗಳ ಮೇಲೆ ಕಂಡು ಬರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಜೀವನದಲ್ಲಿ ಇದರಿಂದ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಮೂವತ್ತು ವರ್ಷಗಳ ಬಳಿಕ ಹತ್ತಿರಕ್ಕೆ ಬರಲಿದ್ದಾರೆ ಬುಧ ಹಾಗೂ ಶನಿ, ಈ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Budh Retrograde In Vruschik Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುದ್ಧಿದಾತ ಬುಧನ ವಕ್ರನಡೆ ವೃಶ್ಚಿಕ ರಾಶಿಯಲ್ಲಿ ಆರಂಭಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನಕುಬೇರ ಕೃಪೆಯಿಂದ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. (Spiritual News In Kannada)

2 /5

ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಬುಧ ತನ್ನ ವಕ್ರನಾದೆ ಅನುಸರಿಸುತ್ತಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮಗೆ ವಾಹನ-ಪ್ರಾಪರ್ಟಿ ಸುಖ ಪ್ರಾಪ್ತಿಯಾಗಲಿದೆ. ವೃತ್ತಿಯಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ. ಸಾಮಾಜಿಕ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಹಣ ಕೂಡಿಹಾಕುವಲ್ಲಿ ನೀವು ಅಪಾರ ಯಶಸ್ಸನ್ನು ಸಾಧಿಸುವಿರಿ. ರಿಯಲ್ ಎಸ್ಟೇಟ್-ಆಸ್ತಿಪಾಸ್ತಿಗೆ ಸಂಬಂಧಿಸಿದ ವ್ಯವಹಾರ ನಡೆಸುತ್ತಿದ್ದರೆ ನಿಮಗೆ ಅಪಾರ ಲಾಭ ಉಂಟಾಗಲಿದೆ.   

3 /5

ಮಕರ ರಾಶಿ: ನಿಮ್ಮ ಗೋಚರ ಜಾತಕಕ್ಕೆ ಶನಿ ಅಧಿಪತಿಯಾಗಿದ್ದಾನೆ ಮತ್ತು ಬುಧ ಶನಿಯ ಮಿತ್ರನಾಗಿದ್ದಾನೆ. ಇದಲ್ಲದೆ ಆತ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ  ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಜೊತೆಗೆ ಆದಾಯದ ಹೊಸ ಮಾರ್ಗಳು ಕೂಡ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನೀವು ವೃತ್ತಿ ಜೀವನದ ಜೊತೆಗೆ ವೈಯಕ್ತಿಕ ಜೀವನದಲ್ಲಿಯೂ ಕೂಡ ಉತ್ತಮ ಪ್ರದರ್ಶನ ತೋರುವಿರಿ. ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನೀವು ಮಾಡಿರುವ ಹೂಡಿಕೆಗಳಿಂದ ನಿಮಗೆ ಅಪಾರ ಲಾಭ ಉಂಟಾಗುವ ಸಂಕೇತಗಳಿವೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲಗೊಳ್ಳಲಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರಗಳು ನಿಮಗೆ ಪ್ರಾಪ್ತಿಯಾಗಲಿವೆ. ಮಕ್ಕಳ ಅಪೇಕ್ಷೆಯಲ್ಲಿರುವವರಿಗೆ ಸಂತಾನ ಭಾಭ ಪ್ರಾಪ್ತಿಯಾಗುವ ಸಾಧ್ಯತೆ ಇದೆ. 

4 /5

ಮೀನ ರಾಶಿ: ಬುಧನ ವಕ್ರನಡೆ ನಿಮ್ಮ ಪಾಲಿಗೂ ಕೂಡ ಶುಭ ಸಾಬೀತಾಗಲಿದೆ. ಬುಧ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ವಕ್ರನಡೆ ಅನುಸರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ನೀವು ಅಂದುಕೊಂಡ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ನೀವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಿವಾಹ ನಿಶ್ಚಿತಾರ್ಥ ಕೂಡ ನೆರವೇರುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ಈ ಯಾತ್ರೆ ಭವಿಷ್ಯದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)