ಬೆಳಗಾವಿ: ರಾಜ್ಯದ 31 ಜಿಲ್ಲೆಯ 195 ಬ್ಲಾಕ್ಗಳಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ 100 ದಿನಗಳನ್ನು 150 ದಿನಗಳಿಗೆ ಹೆಚ್ಚಿಸಿ, 18 ಕೋಟಿ ಮಾನವ ದಿನಗಳನ್ನು ನೀಡಲು ಕೇಂದ್ರಕ್ಕೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೂ ಪರಿಗಣಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಈ ಕುರಿತು ಮರು ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ಇದನ್ನೂ ಓದಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹೊಸ ಘೋಷಣೆಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ
ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ನರೇಗಾ ಕೂಲಿ ದಿನಗಳ ಹೆಚ್ಚಳದ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಘೋಷಿಸುವ ಪೂರ್ವದಿಂದಲೇ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೀಡುವ ಮಾನವ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಿಸಲು ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 19, 2023 ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಆಯುಕ್ತರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಸ್ವತ: ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದು, ಇದಕ್ಕೆ ಉತ್ತರವಾಗಿ ಅಕ್ಟೋಬರ್ 31 ರಂದು ಮರು ಸಂದೇಶ ಬಂದಿದೆ. ಆದರೆ ನಿನ್ನೆ ದಿನ ಸಂಸತ್ ಕಲಾಪದಲ್ಲಿ ಕೇಂದ್ರ ಸಚಿವರು ಕರ್ನಾಟಕ ರಾಜ್ಯ ಸರ್ಕಾರದಿಂದ ಈ ಕುರಿತು ಪ್ರಸ್ತಾವನೆ ಸ್ವೀಕರಿಸಿಲ್ಲ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: "ರಾಜ್ಯ ಪ್ರತ್ಯೇಕತೆ ಪರಿಹಾರವಲ್ಲ; ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು"
ರಾಜ್ಯ ಸರ್ಕಾರವು ಈ ಹಿಂದಿನ ಪ್ರಸ್ತಾವನೆಗಳನ್ನು ಉಲ್ಲೇಖಿಸಿ ಮತ್ತೊಮ್ಮೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೀಡುವ ಮಾನವ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಿಸಲು ಮರು ಪ್ರಸ್ತಾವನೆಯನ್ನು ಸಲ್ಲಿಸಲಾಗುವುದೆಂದು ಸದನದಲ್ಲಿ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.