Health Benefits of Custard Apple: ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಣ್ಣುಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳು ಮತ್ತು ವಿಟಮಿನ್’ಗಳು ಕಂಡುಬರುತ್ತವೆ. ಈ ಕಾರಣದಿಂದಾಗಿ ದೈನಂದಿನ ಆಹಾರದಲ್ಲಿ ಹಣ್ಣುಗಳನ್ನು ಸೇರಿಸಲು ಸಲಹೆ ನೀಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ, ಮೆಗ್ನೀಸಿಯಮ್, ವಿಟಮಿನ್ ಬಿ6 ಮತ್ತು ಐರನ್ ಇತ್ಯಾದಿಗಳು ಹೇರಳವಾಗಿವೆ. ಈ ಹಣ್ಣನ್ನು ಹೃದಯ ಮತ್ತು ಮಧುಮೇಹ ಎರಡಕ್ಕೂ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲದೆ, ಈ ಹಣ್ಣನ್ನು ವಾರಕ್ಕೆ ಮೂರು ಬಾರಿ ಹಾಲಿನ ಜೊತೆ ಬೆರೆಸಿ ಕುಡಿದರೆ ಅದ್ಭುತ ಪ್ರಯೋಜನಗಳು ಸಿಗುತ್ತವೆ
ವೆಬ್ ಎಮ್’ಡಿ ಪ್ರಕಾರ, ಸೀತಾಫಲದಲ್ಲಿರುವ ವಿಟಮಿನ್ ಸಿ ಉತ್ಕರ್ಷಣ ನಿರೋಧಕವಾಗಿದೆ. ಸೀತಾಫಲ ಹೃದಯ ಮತ್ತು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿ. ವಿಟಮಿನ್ ಸಿ ಪೂರೈಸಲು ಸೀತಾಫಲವನ್ನು ಸೇವಿಸಬಹುದು.
ಸೀತಾಫಲವು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಸೀತಾಫಲದಲ್ಲಿರುವ ಲುಟೀನ್ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದ್ದು, ಅನೇಕ ಕಣ್ಣಿನ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಆರೋಗ್ಯವನ್ನು ಕಾಪಾಡುತ್ತದೆ.
ಸೀತಾಫಲವು ರಕ್ತದೊತ್ತಡಕ್ಕೆ ತುಂಬಾ ಪ್ರಯೋಜನಕಾರಿ. ಸೀತಾಫಲದಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಇದ್ದು, ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದ್ರೋಗವನ್ನು ತಡೆಗಟ್ಟಲು ಸಹ ಸಾಧ್ಯವಿದೆ.
ಸೀತಾಫಲವನ್ನು ತಿನ್ನುವುದು ಅಸ್ತಮಾ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದರ ಸೇವನೆಯಿಂದ ಶ್ವಾಸಕೋಶದಲ್ಲಿನ ಊತ ನಿವಾರಣೆಯಾಗುವುದಲ್ಲದೆ ಅಲರ್ಜಿ ಸಮಸ್ಯೆಯೂ ಕಡಿಮೆಯಾಗುತ್ತದೆ.
ಸೀತಾಫಲದಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಮಲಬದ್ಧತೆ ಮತ್ತು ಅತಿಸಾರದಂತಹ ಸಮಸ್ಯೆಗಳನ್ನು ತೆಗೆದುಹಾಕುತ್ತದೆ.
ಸೀತಾಫಲವನ್ನು ವಿಟಮಿನ್ ಸಿ ಯ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಇದನ್ನು ಹಾಲಿನ ಜೊತೆ ಬೆರೆಸಿ ಜ್ಯೂಸ್’ನಂತೆ ಮಾಡಿಕೊಂಡು ಸೇವಿಸಿದರೆ, ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ತುಂಬಾ ಸಹಾಯಕವಾಗಿದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)