ನವದೆಹಲಿ: ಮದುವೆ ಅನ್ನೋದು ಸ್ವರ್ಗದಲ್ಲೇ ನಿರ್ಧಾರಿತವಾಗಿರುತ್ತದೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ, ಆದರೆ ವಧು ಮತ್ತು ವರರು ಒಪ್ಪದಿದ್ದರೆ ಮದುವೆ ಎಂದಿಗೂ ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಹುಡುಗಿ ಎಲ್ಲರ ಮುಂದೆ ವರನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾಳೆ. ಹುಡುಗಿ ಬೇರೊಬ್ಬರನ್ನು ಪ್ರೀತಿಸುತ್ತಿದ್ದು, ಒತ್ತಡದಿಂದ ಮದುವೆಯಾಗಲು ಸಾಧ್ಯವಿಲ್ಲ ಎಂದಿದ್ದಾಳೆ ಎನ್ನಲಾಗಿದೆ. ಈ ವೀಡಿಯೋ ನೋಡಿದ ಜನರು ಯುವತಿಯ ಈ ನಿರ್ಧಾರವನ್ನು ಸ್ವಾಗತಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಕೆಲವರು ತೀಕ್ಷ್ಣ ಪ್ರತಿಕ್ರಿಯೆಯನ್ನೂ ಕೂಡ ನೀಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಶೇರ್ ಮಾಡಲಾಗುತ್ತಿದೆ.ಕಾಣಬಹುದು (Viral News In Kannada).
ಇದನ್ನೂ ಓದಿ-ಆಸನಕ್ಕಾಗಿ ದೆಹಲಿ ಮೆಟ್ರೊ ರೈಲಿನಲ್ಲಿ ಇಬ್ಬರು ಸಹ ಯಾತ್ರಿಗಳ ನಡುವೆ ಭಾರಿ ಬಾಕ್ಸಿಂಗ್... ವಿಡಿಯೋ ನೋಡಿ
ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ವಧು ವರನನ್ನು ಮದುವೆಗೆ ನಿರಾಕರಿಸುತ್ತಿರುವುದನ್ನು ನೀವು ನೋಡಬಹುದು. ಈ ಸಂದರ್ಭದಲ್ಲಿ, ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಹತ್ತಿರದಲ್ಲಿ ಇರುವುದನ್ನು ನೀವು ಕಾಣಬಹುದು. @ankit6709j ಎಂಬ ಬಳಕೆದಾರರಿಂದ ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ನಿಜ ಎಂದು ಬಳಕೆದಾರರು ಶೀರ್ಷಿಕೆಯಲ್ಲಿ ಹೇಳಿಕೊಂಡಿದ್ದಾರೆ. ಈ ವಿಡಿಯೋ ಹೊರಹೊಮ್ಮಿದ ನಂತರ ಜನರು ತೀವ್ರ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಇದುವರೆಗೆ 4 ಮಿಲಿಯನ್ಗಿಂತಲೂ ಹೆಚ್ಚು ಜನರು ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದೆ ವೇಳೆ ವಿಡಿಯೋ ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ಹಂಚಿಕೆಯಾಗುತ್ತಿದೆ.
ಇದನ್ನೂ ಓದಿ-ಈ ವಿಡಿಯೋ ನೋಡಿದ್ರೆ ಯಾರೂ ಯಾರೊಂದಿಗೂ ಫ್ರಾಂಕ್ ಮಾಡಲ್ಲ... ವಿಡಿಯೋ ನೋಡಿ
ವೈರಲ್ ವಿಡಿಯೋಗೆ ಜನರ ಪ್ರತಿಕ್ರಿಯೆ ಹೇಗಿದೆ?
ವೈರಲ್ ಆಗುತ್ತಿರುವ ಈ ವಿಡಿಯೋಗೆ ಜನರು ತಮ್ಮ ತಮ್ಮ ತೀವ್ರವಾದ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಕುರಿತು ಬರೆದುಕೊಂಡ ಓರ್ವ ಬಳಕೆದಾರೆ, ‘ದೇವರು ಯಾರಿಗೂ ಹೀಗೆ ಮಾಡದಿರಲಿ’ ಎಂದಿದ್ದಾರೆ, ಮತ್ತೊರ್ವ ಬಳಕೆದಾರರು, ‘ಹುಡುಗಿಯರು ಇಷ್ಟವಿಲ್ಲದಿದ್ದರೆ ಮೊದಲೇ ಹೇಳಬೇಕು, ಯಾವ ಹುಡುಗನನ್ನೂ ಈ ರೀತಿ ಅವಮಾನಿಸಬಾರರು ಎಂದು ಕೈಮುಗಿದು ಕೇಳಿಕೊಳ್ಳುತ್ತೇನೆ' ಎಂದಿದ್ದಾನೆ. ಮೂರನೇ ಬಳಕೆದಾರರು 'ಬಡಪಾಯಿ ಹುಡುಗನಿಗೆ ಎನಾಗುತ್ತೋ, ಆತನ ಜೀವನದ ಬಗ್ಗೆ ಚಲನಚಿತ್ರವನ್ನೇ ಮಾಡಿದ್ದಾರೆ' ಎನ್ನಲಾಗಿದೆ.
ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿ ನೋಡಿ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ