ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ಭೇಟಿ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ‘ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿರುವುದು ಸಂತೋಷದ ಸಂಗತಿ’ ಎಂದು ಹೇಳಿದ್ದಾರೆ. ‘ರಾಷ್ಟ್ರದ ಪ್ರಗತಿಗೆ ದೇವೇಗೌಡರು ನೀಡಿದ ಕೊಡುಗೆಯನ್ನು ದೇಶ ಗೌರವಿಸುತ್ತದೆ. ವೈವಿಧ್ಯಮಯ ನೀತಿ ವಿಷಯಗಳ ಕುರಿತ ಅವರ ಆಲೋಚನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದವುಗಳಾಗಿವೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
Always a delight to meet former PM Shri @H_D_Devegowda Ji, Shri @hd_kumaraswamy Ji and Shri HD Revanna Ji.
India greatly cherishes Deve Gowda Ji's exemplary contribution to the nation's progress. His thoughts on diverse policy matters are insightful and futuristic. pic.twitter.com/Xa3YImOLYz
— Narendra Modi (@narendramodi) December 21, 2023
ಈ ಬಗ್ಗೆ ದೇವೇಗೌಡರು ಸಹ ಟ್ವೀಟ್ ಮಾಡಿದ್ದು, ‘ನನಗೆ ನೀಡಿದ ಆತ್ಮೀಯ ಗೌರವಕ್ಕೆ ನಾನು ಪ್ರಧಾನಿ ಮೋದಿಯವರಿಗೆ ಅಪಾರ ಆಭಾರಿಯಾಗಿದ್ದೇನೆ. ಭಾರತದ ಅಭಿವೃದ್ಧಿಗಾಗಿ ಅವರ ದೃಷ್ಟಿ, ಅವರ ಕ್ರಿಯಾಶೀಲತೆ ಮತ್ತು ಮಿತಿಯಿಲ್ಲದ ಶಕ್ತಿಯು ನಮಗೆ ಬಹಳಷ್ಟು ಒಳ್ಳೆಯದನ್ನು ಮಾಡಿದೆ. ನನ್ನನ್ನು ಮತ್ತು ನನ್ನ ಪಕ್ಷದ ನಿಯೋಗದ ಜೊತೆಗೆ ಉತ್ತಮ ಸಮಯ ಕಳೆದಿದ್ದಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ’ ಅಂತಾ ಹೇಳಿದ್ದಾರೆ.
I am immensely grateful to Prime Minister @narendramodi for the warmth and respect he has always accorded me. His vision for India’s development, his dynamism and boundless energy has done us a lot of good. My sincere thanks for receiving me and my party delegation. @PMOIndia pic.twitter.com/GqLPgi4sqT
— H D Deve Gowda (@H_D_Devegowda) December 21, 2023
‘ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ-ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ. ಸಂಸತ್ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ. ಪ್ರಧಾನಮಂತ್ರಿಗಳು ನಮ್ಮ ಬಗ್ಗೆ ತೋರಿದ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಆಭಾರಿ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಸಿ.ಎನ್.ಬಾಲಕೃಷ್ಣ ಜೊತೆಯಲ್ಲಿದ್ದರು’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi
ಅವರು ಹಾಗೂ ಮಾನ್ಯ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ@H_D_Devegowda ಅವರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ. ಸಂಸತ್ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ.… pic.twitter.com/siTGEt4r6J— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 21, 2023
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ರಣತಂತ್ರ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಹುಮತದೊಂದಿಗೆ ಅಧಿಕಾರ ಪಡೆದ ಬಳಿಕ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯನ್ನು ಘೋಷಣೆ ಮಾಡಿವೆ. ‘ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಸೀಟು ಹಂಚಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಶೀಘ್ರವೇ ಸೀಟು ಹಂಚಿಕೆ ಅಂತಿಮಗೊಳಿಸಲಾಗುತ್ತದೆ’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.