Yuva Nidhi Eligibility criteria: ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ಡಿ.26ರಿಂದ ನೋಂದಣಿ ಆರಂಭವಾಗಲಿದೆ. ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನೀಡುವ ಈ ಯೋಜನೆ ಜಾರಿಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ‘ಯುವನಿಧಿ’ ಪಡೆಯುವುದು ಹೇಗೆ..? ಈ ಯೋಜನೆಗೆ ಯಾರು ಅರ್ಹರು..? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳು 2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಸಿಗದವರು ಮಾತ್ರ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ 2 ವರ್ಷಗಳ ಗರಿಷ್ಠ ಅವಧಿವರೆಗೆ ಮಾತ್ರ ‘ಯುವನಿಧಿ’ ಭತ್ಯೆ ಸಿಗಲಿದೆ.
‘ಸೇವಾಸಿಂಧು’ ಪೋರ್ಟಲ್ ಮೂಲಕವೇ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಭತ್ಯಯನ್ನು ಡಿಬಿಟಿ ಮೂಲಕ ನೀಡಲಾಗುವುದು.
ಅಭ್ಯರ್ಥಿಗಳು ನಿರುದ್ಯೋಗ ಸ್ಥಿತಿ ಬಗ್ಗೆ ನಿಜವಾದ ಮಾಹಿತಿ ನೀಡಬೇಕು. ಉದ್ಯೋಗ ಪಡೆದ ನಂತರ ತಪ್ಪು ಮಾಹಿತಿ ನೀಡಿ ಸರ್ಕಾರಕ್ಕೆ ವಂಚಿಸಲು ಪ್ರಯತ್ನಿಸಿದರೆ ದಂಡ ವಿಧಿಸಲಾಗುವುದು.
ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.