"ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು"

ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Written by - Manjunath N | Last Updated : Dec 22, 2023, 04:58 PM IST
  • ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ.
  • ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ.
  • ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ
"ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು" title=

ಮೈಸೂರು: ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಅವರು ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇದನ್ನು ಓದಿ-ಆಸ್ಟ್ರೇಲಿಯಾವನ್ನು 219 ಕ್ಕೆ ಆಲೌಟ್ ಮಾಡಿದ ಭಾರಿತೀಯ ವನಿತೆಯರು !

ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ಸಭೆಯಲ್ಲೇ ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು.

ಮೈಸೂರಿನಲ್ಲಿ 6 ಜನರಿಗೆ ಕೋವಿಡ್ ತಗುಲಿದ್ದು, ಅವರು ಇತರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈಗ ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News