Anti-India slogans on the temple wall: ಖಲಿಸ್ತಾನ್ ಬೆಂಬಲಿಗರು ಮತ್ತೊಮ್ಮೆ ಹಿಂದೂ ದೇವಾಲಯವನ್ನು ಗುರಿಯಾಗಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿ ಖಲಿಸ್ತಾನ್ ಬೆಂಬಲಿಗರು ಹಿಂದೂ ದೇವಾಲಯದ ಹೊರ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದಿದ್ದಾರೆ. ನೆವಾರ್ಕ್ ನಗರದಲ್ಲಿ ಸ್ವಾಮಿನಾರಾಯಣ ದೇವಸ್ಥಾನವಿದೆ. ಈ ದೇವಾಲಯದ ಗೋಡೆಗಳ ಮೇಲೆ ಕಪ್ಪು ಬಣ್ಣದಲ್ಲಿಘೋಷಣೆಗಳನ್ನು ಬರೆಯಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ನೇವಾರ್ಕ್ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಹಿಂದೂ-ಅಮೆರಿಕನ್ ಫೌಂಡೇಶನ್ ದೇವಾಲಯದ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ಫೊಟೋಗಳ ಜೊತೆ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಖಾಲಿಸ್ತಾನಿ ಘೋಷಣೆಗಳನ್ನು ಬರೆದಿದ್ದಾರೆ ಮತ್ತು ಹಾನಿ ಮಾಡಿದ್ದಾರೆ ಎಂದು ಬರೆಯಲಾಗಿದೆ.
ಇದನ್ನೂ ಓದಿ: Viral Video: ಕೆಲಸಗಾರರಿಗೆ ನೀರುನಾಯಿ ಹೇಗೆ ಹೆಲ್ಪ್ ಮಾಡುತ್ತೆ ನೋಡಿ
ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ವಿಷಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸ್ವಾಮಿನಾರಾಯಣ ದೇವಸ್ಥಾನದ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯುವುದನ್ನು ರಾಯಭಾರ ಕಚೇರಿ ತೀವ್ರವಾಗಿ ಖಂಡಿಸಿದೆ ಮತ್ತು ಈ ಘಟನೆಯಿಂದ ಭಾರತೀಯ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳಿದೆ.
#Breaking: Swaminarayan Mandir Vasana Sanstha in Newark, California was defaced with pro-#Khalistan slogans.@NewarkCA_Police and @CivilRights have been informed and full investigation will follow.
We are insisting that this should be investigated as a hate crime. pic.twitter.com/QHeEVWrkDj
— Hindu American Foundation (@HinduAmerican) December 22, 2023
ಈ ವರ್ಷದ ಆಗಸ್ಟ್‌ನಲ್ಲಿ ಕೆನಡಾದ ಕೊಲಂಬಿಯಾ ನಗರದಲ್ಲಿ ಖಾಲಿಸ್ತಾನಿ ಬೆಂಬಲಿಗರು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದರು. ದೇವಸ್ಥಾನದ ಬಾಗಿಲಿಗೆ ಖಲಿಸ್ತಾನಿ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಈ ಸಂಪೂರ್ಣ ಘಟನೆ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವರ್ಷದ ಜನವರಿಯಲ್ಲಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.
ಇದನ್ನೂ ಓದಿ: ಕುಳಿತಲ್ಲೇ ಕೋಟಿಗಟ್ಟಲೆ ದುಡಿಯುತ್ತೇ ಈ ʼನಾಯಿʼ..! ಶ್ವಾನದ ಮಾಲೀಕ ಈಗ ʼಮ್ಯಾನೇಜರ್ʼ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.