ಬೆಂಗಳೂರು: ಕೊರೊನಾ ಕಾಲದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು 4,000 ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ?’ ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ಕಾಲದಲ್ಲಿ @BSYBJP ನೇತೃತ್ವದ @BJP4Karnataka ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ @BasanagoudaBJP ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.
ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ…
— CM of Karnataka (@CMofKarnataka) December 26, 2023
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು AAPಯಿಂದ ಕದ್ದಿರುವುದು!
‘ಶಾಸಕರಾದ ಬಸನಗೌಡ ಪಾಟೀಲ್ ಅವರು ಹಿಟ್ ಅಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲಾ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಶಾಸಕರಾದ @BasanagoudaBJP ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ…
— CM of Karnataka (@CMofKarnataka) December 26, 2023
‘ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಶಕುನಿ ಎಂದ ಯತ್ನಾಳ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಶಾಸಕ @BasanagoudaBJP ಅವರು ಮಾಜಿ ಮುಖ್ಯಮಂತ್ರಿ @BSYBJP ಮತ್ತು ಅವರ ಪುತ್ರ @BYVijayendra ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ @BJP4Karnataka ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ…
— CM of Karnataka (@CMofKarnataka) December 26, 2023
‘ತನ್ನನ್ನು ದೇಶದ "ಚೌಕಿದಾರ" ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು "ನ ಖಾವೂಂಗಾ ನಾ ಖಾನೆ ದೂಂಗಾ" ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.