ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ : ಸಿಎಂ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ್‌ ಯತ್ನಾಳ್ ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್‌ ಹಗರಣಗಳ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Written by - Prashobh Devanahalli | Edited by - Krishna N K | Last Updated : Dec 28, 2023, 03:46 PM IST
  • ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್‌ ಹಗರಣ
  • ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪ
  • ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದ ಸಿಎಂ
ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ : ಸಿಎಂ title=

ಬೆಂಗಳೂರು : ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೊರೊನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಬಸನಗೌಡ್‌ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಯತ್ನಾಳ್‌ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್‌ ಹಗರಣಗಳ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ- ಸಿಎಂ
 
ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News