ದಿನ ಪತ್ರಿಕೆ ವಿತರಕರಿಂದ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವಲಯದಡಿ ಬರುವ ದಿನ ಪತ್ರಿಕೆ ವಿತರಿಸುವ ಕಾರ್ಮಿಕರು ಅಪಘಾತಗೊಂಡಲ್ಲಿ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಪಡೆಯಲು ಅರ್ಹ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಕಮಲ್ ಷಾ ಅಲ್ತಾಫ್ ಅಹಮದ್ ಅವರು ತಿಳಿಸಿದ್ದಾರೆ.

Written by - Manjunath N | Last Updated : Dec 28, 2023, 10:18 PM IST
  • 16 ರಿಂದ 59 ವಯಸ್ಸಿನವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು
  • ಇ.ಪಿ.ಎಫ್ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು
  • ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್‍ನಲ್ಲಿ “News Paper Boy” ಎಂಬ ವರ್ಗದಡಿ ನೋಂದಣಿಯಾಗಿರಬೇಕು.
 ದಿನ ಪತ್ರಿಕೆ ವಿತರಕರಿಂದ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಬಳ್ಳಾರಿ: ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವಲಯದಡಿ ಬರುವ ದಿನ ಪತ್ರಿಕೆ ವಿತರಿಸುವ ಕಾರ್ಮಿಕರು ಅಪಘಾತಗೊಂಡಲ್ಲಿ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಪಡೆಯಲು ಅರ್ಹ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಕಮಲ್ ಷಾ ಅಲ್ತಾಫ್ ಅಹಮದ್ ಅವರು ತಿಳಿಸಿದ್ದಾರೆ.

ಸರ್ಕಾರವು ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲಾ ಅರ್ಹ ದಿನಪತ್ರಿಕೆ ವಿತರಿಸುವ ಕಾರ್ಮಿಕರುಗಳು ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್‍ನಲ್ಲಿ (https://eshram.gov.in) “News Paper Boy” ಎಂಬ ವರ್ಗದಡಿ ನೋಂದಾಯಿಸಿಕೊಳ್ಳಬೇಕು.

ಇದನ್ನೂ ಓದಿ: ಕಾರ್ಯಕರ್ತರ ಕೋಪಕ್ಕೆ BMTC ಬಸ್‌ ಗ್ಲಾಸ್‌ ಪೀಸ್‌ ಪೀಸ್‌

ಸೌಲಭ್ಯಗಳು:

ಅಪಘಾತದಿಂದ ಮರಣ ಹೊಂದಿದಲ್ಲಿ ರೂ.2 ಲಕ್ಷ ಪರಿಹಾರ. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷಗಳವರೆಗೆ (ಶೇಕಡಾವಾರು ದುರ್ಬಲತೆ ಆಧಾರದ ಮೇಲೆ) ಪರಿಹಾರ. ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷಗಳವರೆಗೆ ಪರಿಹಾರ ಸಿಗಲಿದೆ.

ಅರ್ಹತೆ:

16 ರಿಂದ 59 ವಯಸ್ಸಿನವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಪಿ.ಎಫ್ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್‍ನಲ್ಲಿ “News Paper Boy” ಎಂಬ ವರ್ಗದಡಿ ನೋಂದಣಿಯಾಗಿರಬೇಕು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಬಳಿ ರಸ್ತೆ ಸಂಪೂರ್ಣ ಬಂದ್

ದಾಖಲೆಗಳು:

ಆಧಾರ್ ಕಾರ್ಡ್(ಆಧಾರ್ ಕಾರ್ಡ್ ಇ ಕೆವೈಸಿ ಕಡ್ಡಾಯ), ಸಕ್ರಿಯ ಬ್ಯಾಂಕ್ ಖಾತೆಯ ಪಾಸ್ ಬುಕ್, ಸಕ್ರಿಯ ಮೊಬೈಲ್ ಸಂಖ್ಯೆ. ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶದ ಮಹಮ್ಮದಿಯ ಕಾಲೇಜ್ ಹಿಂಭಾಗದ ಬಳ್ಳಾರಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಅವರ ಕಚೇರಿ ಅಥವಾ ಕಚೇರಿಯ ದೂ.08392-254875 ಹಾಗೂ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳನ್ನು ಸಂಪರ್ಕಿಸಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News