Best Home Remedies For Hangover: ಇನ್ನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆರಂಭವಾಗಲಿದೆ. ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಲು ಕೆಲವರು ಈಗಾಗಲೇ ಪ್ರವಾಸ ಮತ್ತು ಪಾರ್ಟಿಗಳನ್ನು ಯೋಜಿಸುತ್ತಿದ್ದಾರೆ. ಹೊಸ ವರ್ಷದ ಪಾರ್ಟಿ ಬಳಿಕ ಹ್ಯಾಂಗೊವರ್ ಆಗುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಈ ಹ್ಯಾಂಗೊವರ್‌ನಿಂದಾಗಿ ಕೆಲವು ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿವೆ. ಕೆಲವು ಜನರು ಹ್ಯಾಂಗೊವರ್‌ನಿಂದ ತಲೆನೋವು, ಆಸಿಡಿಟಿ ಮತ್ತು ಆಯಾಸದಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಆದ್ದರಿಂದ ಇಂತಹ ಸಮಸ್ಯೆಗಳನ್ನು ತಪ್ಪಿಸಲು ಕೆಲವು ಮನೆಮದ್ದುಗಳನ್ನು ಅನುಸರಿಸಿ ಮತ್ತು ಸುಲಭವಾಗಿ ಪರಿಹಾರವನ್ನು ಪಡೆಯಿರಿ.
ಹೆಚ್ಚು ನೀರು ಕುಡಿಯಿರಿ: ಕುಡಿದ ನಂತರ ಹ್ಯಾಂಗೊವರ್ ತಡೆಗಟ್ಟಲು ಸಾಕಷ್ಟು ನೀರು ಕುಡಿಯುವ ಅಗತ್ಯವಿದೆ. ಮಿನರಲ್ಸ್ ಮತ್ತು ಎಲೆಕ್ಟ್ರೋಲೈಟ್ ಇರುವ ನೀರನ್ನು ಕುಡಿಯುವುದು ಉತ್ತಮ ಎನ್ನುತ್ತಾರೆ ಆರೋಗ್ಯ ತಜ್ಞರು. ಅತಿಯಾಗಿ ಕುಡಿದ ನಂತರ ಪದೇ ಪದೇ ಮೂತ್ರ ವಿಸರ್ಜನೆ, ವಾಂತಿ, ಆಯಾಸದಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಹೆಚ್ಚು ನೀರು ಕುಡಿಯುವುದು ಉತ್ತಮ ಫಲಿತಾಂಶವನ್ನು ನೀಡುತ್ತದೆ.
ಇದನ್ನೂ ಓದಿ : ಈರುಳ್ಳಿ ನೀರು ಆರೋಗ್ಯಕ್ಕೆ ಅಮೃತ.. ಹೊಟ್ಟೆಯಿಂದ ಕೂದಲಿನವರೆಗೆ 5 ಅದ್ಭುತ ಪ್ರಯೋಜನ
ಶುಂಠಿ ಟೀ : ಶುಂಠಿ ಚಹಾವು ಹ್ಯಾಂಗೋವರ್‌ಗಳನ್ನು ನಿವಾರಿಸಲು ಸಹ ಪರಿಣಾಮಕಾರಿಯಾಗಿದೆ. ಹಾಗೆಯೇ ಶುಂಠಿಯ ರಸವನ್ನು ನೀರಿಗೆ ಬೆರೆಸಿ ಉಪ್ಪು ಬೆರೆಸಿ ಸೇವಿಸಿದರೆ ಹ್ಯಾಂಗೋವರ್ ನಿಂದ ಸುಲಭವಾಗಿ ಪರಿಹಾರ ಪಡೆಯಬಹುದು.
ಎಳೆನೀರು: ಅಲ್ಕೋಹಾಲ್ ಸೇವನೆಯು ನಿರ್ಜಲೀಕರಣದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಇಂತಹ ಸಮಸ್ಯೆಗಳನ್ನು ತಪ್ಪಿಸಲು ನೀವು ಎಳೆನೀರನ್ನು ಕುಡಿಯಬೇಕು. ಎಳೆನೀರಿನಿಂದ ನೀವು ಹ್ಯಾಂಗೊವರ್‌ನಿಂದ ಸುಲಭವಾಗಿ ಪರಿಹಾರವನ್ನು ಪಡೆಯುತ್ತೀರಿ.
ನಿಂಬೆ ರಸ: ನಿಂಬೆ ರಸದಲ್ಲಿ ಸಿಟ್ರಿಕ್ ಹಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಆದ್ದರಿಂದ ಈ ನೀರನ್ನು ಕುಡಿಯುವುದರಿಂದ ಹ್ಯಾಂಗೊವರ್‌ನಿಂದ ಸುಲಭ ಪರಿಹಾರ ಸಿಗುತ್ತದೆ. ತಲೆನೋವು ಮತ್ತು ವಾಂತಿ ಕೂಡ ದೂರವಾಗುತ್ತದೆ.
ಇದನ್ನೂ ಓದಿ : ಕಪ್ಪು ದ್ರಾಕ್ಷಿಯನ್ನು ಈ ರೀತಿ ತಿಂದರೆ ಮುಟ್ಟಿನ ಸಮಯದ ನೋವು ಮಾಯವಾಗುವುದು!
ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.