Petrol Price: ಹೊಸ ವರ್ಷಕ್ಕೆ ವಾಹನ ಸವಾರರಿಗೆ ಬಂಪರ್‌ ಗಿಫ್ಟ್.. ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಇಳಿಕೆ..!

Petrol Diesel Price : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿತ್ತು. ಇದರಿಂದ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೊನೆಗೂ ಸಂತಸದ ಸುದ್ದಿ ಸಿಕ್ಕಿದೆ. ಹೊಸ ವರ್ಷಕ್ಕೂ ಮುನ್ನ ಪೆಟ್ರೋಲ್ - ಡೀಸೆಲ್ ಬೆಲೆ ಭಾರೀ ಇಳಿಕೆ ಕಂಡಿದೆ. 

Written by - Chetana Devarmani | Last Updated : Dec 30, 2023, 12:52 PM IST
  • ವಾಹನ ಸವಾರರಿಗೆ ಸಂತಸದ ಸುದ್ದಿ
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
  • ಪೆಟ್ರೋಲ್ - ಡೀಸೆಲ್ ಬೆಲೆ ಇಳಿಕೆ
Petrol Price: ಹೊಸ ವರ್ಷಕ್ಕೆ ವಾಹನ ಸವಾರರಿಗೆ ಬಂಪರ್‌ ಗಿಫ್ಟ್.. ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಇಳಿಕೆ..! title=

Petrol Diesel Price : ಮುಂದಿನ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಶುಭ ಸುದ್ದಿ ಹೊರಬೀಳುವ ಸಾಧ್ಯತೆ ಇದೆ. ಹೊಸ ವರ್ಷದ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 10 ರೂ.ವರೆಗೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ಯೋಜಿಸಿದೆ ಎನ್ನಲಾಗಿದೆ. ಪೆಟ್ರೋಲಿಯಂ ಸಚಿವಾಲಯವು ಪ್ರತಿ ಲೀಟರ್ ಗೆ 8ರೂ. ದಿಂದ 10 ರೂ. ವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಪ್ರಸ್ತಾವನೆಯನ್ನು ಪ್ರಧಾನಿಯವರ ಒಪ್ಪಿಗೆಗಾಗಿ ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ಹೊಸ ವರ್ಷದ ಆರಂಭದ ಹೊತ್ತಿಗೆ ಕೇಂದ್ರದಿಂದ ಅನುಮೋದನೆ ಸಿಗಲಿದೆ ಎಂದು ಸರ್ಕಾರಿ ಮೂಲಗಳು ಬಹಿರಂಗಪಡಿಸಿವೆ. ಈಗಾಗಲೇ ಗ್ಯಾಸ್ ಬೆಲೆ ಇಳಿಸಿರುವ ಮೋದಿ ಸರ್ಕಾರ ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಮುಂದಾಗಿದೆ. ಇದರಿಂದ ವಾಹನ ಸವಾರರಿಗೆ ಭಾರೀ ನೆಮ್ಮದಿ ಸಿಗಲಿದೆ. 

ಕಳೆದ ವರ್ಷ ಏಪ್ರಿಲ್ 6 ರಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ಸಂಸ್ಕರಣಾ ಪೂರ್ವ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್) ಕಡಿಮೆ ಕಚ್ಚಾ ತೈಲ ಬೆಲೆಯಿಂದಾಗಿ ಭಾರಿ ಲಾಭ ಗಳಿಸಿವೆ. ಈ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ IOC, BPCL ಮತ್ತು HPCL ಒಟ್ಟಾರೆಯಾಗಿ 58,198 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿವೆ. ಕಚ್ಚಾ ತೈಲ ಬೆಲೆಯೂ ಇಳಿಮುಖವಾಗಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲು ಕೇಂದ್ರ ಸಿದ್ಧತೆ ನಡೆಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಹಣಕಾಸು ಸಚಿವಾಲಯ ಮತ್ತು ಪೆಟ್ರೋಲಿಯಂ ಸಚಿವಾಲಯ ಸಿದ್ಧವಿದ್ದರೂ ಪ್ರಧಾನಿ ಕಚೇರಿಯ ಅನುಮತಿಗಾಗಿ ಕಾಯುತ್ತಿವೆ. 

ಇದನ್ನೂ ಓದಿ : ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರಿಗೆ ಭರ್ಜರಿ ಸುದ್ದಿ ಪ್ರಕಟಿಸಿದ ಕೇಂದ್ರ ಸರ್ಕಾರ! 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲು ತೈಲ ಕಂಪನಿಗಳೊಂದಿಗೆ ಕೇಂದ್ರ ಮಾತುಕತೆ ನಡೆಸುತ್ತಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸೂಚನೆಗಳಿವೆ. ದೇಶದಲ್ಲಿ ತೈಲ ಬೆಲೆ ದಿನದಿಂದ ದಿನಕ್ಕೆ ನಿರ್ಧಾರವಾಗುತ್ತಿರುವುದು ಗೊತ್ತೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಯನ್ನು ಆಧರಿಸಿ ತೈಲ ಕಂಪನಿಗಳು ಕಾಲಕಾಲಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕರಿಸುತ್ತವೆ. ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆ 78.71 ಡಾಲರ್ ತಲುಪಿದೆ ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ. 

ಸದ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂಪಾಯಿ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 101.94 ರೂಪಾಯಿ, ಹೈದರಾಬಾದ್‌ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 109.66 ರೂಪಾಯಿ, ವಿಶಾಖಪಟ್ಟಣದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 110.48 ರೂಪಾಯಿ, ರಾಜಸ್ಥಾನದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 109.34 ರೂಪಾಯಿ, ಹರಿಯಾಣದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 97.31 ರೂಪಾಯಿ ಆಗಿದೆ. 

ಡೀಸೆಲ್ ವಿಚಾರಕ್ಕೆ ಬಂದರೆ ದೆಹಲಿಯಲ್ಲಿ 1 ಲೀಟರ್‌ಗೆ 89.62 ರೂಪಾಯಿ, ಬೆಂಗಳೂರಿನಲ್ಲಿ 87.89 ರೂಪಾಯಿ, ಹೈದರಾಬಾದ್‌ನಲ್ಲಿ 97.82 ರೂಪಾಯಿ, ವಿಶಾಖಪಟ್ಟಣದಲ್ಲಿ 98.27 ರೂಪಾಯಿ ಆಗಿದೆ.

ಇದನ್ನೂ ಓದಿ : ಸರ್ಕಾರಿ ನೌಕರರ ಮೂಲ ವೇತನದಲ್ಲಿ ಬಂಪರ್ ಹೆಚ್ಚಳ ! ಈ ಬಾರಿ ಅವಧಿಗೂ ಮುನ್ನವೇ ನಿರ್ಧಾರ ಪ್ರಕಟ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News