ಅನಧಿಕೃತ ಕಟ್ಟಡಗಳ ತೆರವು: 150 ಕೋಟಿ ಬೆಲೆಬಾಳುವ ಜಾಗ ವಶಕ್ಕೆ ಪಡೆದ ಬಿಡಿಎ

Eviction of unauthorized buildings: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತೆರವುಗೊಳಿಸಿದರು.

Written by - Bhavishya Shetty | Last Updated : Dec 30, 2023, 07:08 PM IST
    • ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ
    • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗ
    • ಅನಧಿಕೃತವಾಗಿ ನಿರ್ಮಾಣವಾಗಿದ್ದ ತೆರವುಗೊಳಿಸಿದ ಅಧಿಕಾರಿಗಳು
ಅನಧಿಕೃತ ಕಟ್ಟಡಗಳ ತೆರವು: 150 ಕೋಟಿ ಬೆಲೆಬಾಳುವ ಜಾಗ ವಶಕ್ಕೆ ಪಡೆದ ಬಿಡಿಎ  title=
Bangalore Development Authority

ಬೆಂಗಳೂರು: ನಗರದಲ್ಲಿರುವ ಹೆಚ್.ಬಿ.ಆರ್. ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ ಸರ್ವೆ ನಂ. 181, 182 ಮತ್ತು 183ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತೆರವುಗೊಳಿಸಿದರು.

ಇದನ್ನೂ ಓದಿ: ಬಾನಂಗಳಕ್ಕೆ ತಲುಪಿ ಮೋಡಗಳ ಮೇಲೆ ಮಹಿಳಾ ಸ್ಕೈ ಡೈವರ್ ನಡಿಗೆ ಮೈನವಿರೇಳಿಸುವಂತಿದೆ.. ವಿಡಿಯೋ ನೋಡಿ!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಸುಮಾರು ರೂ 150 ಕೋಟಿ ಬೆಲೆ ಬಾಳುವ 2.20 ಎಕರೆ ಜಾಗವನ್ನು ಭದ್ರತೆಯ ಹಿತದೃಷ್ಟಿಯಿಂದ 200 ಅಧಿಕಾರಿಗಳು ಸೇರಿದಂತೆ 100 ಜನ ಕಾರ್ಮಿಕರು ಹಾಗೂ 15 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಮ್ಮುಖದಲ್ಲಿ ತೆರವುಗೊಳಿಸಿ ಪ್ರಾಧಿಕಾರದ ಸುಪರ್ದಿಗೆ ತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ಮುಸ್ಲಿಂನನ್ನು ಮದುವೆಯಾದ ಕರೀನಾ ಈಗ ಅನುಸರಿಸುತ್ತಿರುವ ಧರ್ಮ ಯಾವುದು ಗೊತ್ತಾ?

ಅನಧಿಕೃತ ಕಟ್ಟಡಗಳ ತೆರವು ಕಾರ್ಯಕ್ಕೂ ಮುನ್ನ ನೂತನವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡ ಎನ್.ಜಯರಾಂ ಪ್ರಾಧಿಕಾರದ ಕಾನೂನು ಕೋಶದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆಯನ್ನು ಪಡೆದು, ತೆರವು ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿ, ಕಾರ್ಯವನ್ನು ವ್ಯವಸ್ಥಿತವಾಗಿ ಕೈಗೊಂಡರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News