"ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು"

 ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Written by - Manjunath N | Last Updated : Jan 3, 2024, 07:08 PM IST
  • ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ
  • ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ
  • ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ
 "ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು" title=

ಬೆಂಗಳೂರು: ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು. ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ.ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ : ಅಯೋಧ್ಯೆಯಲ್ಲಿ ನಗರ ಯಾತ್ರೆ ವೇಳೆ ಶ್ರೀರಾಮನ ಕಣ್ಣಿಗೆ ಪಟ್ಟಿ ಕಟ್ಟುವ ಹಿಂದಿನ ಕಾರಣ ಇದು! 

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ.ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : INDIA Alliance: 9 ರಾಜ್ಯಗಳಲ್ಲಿ ಮೈತ್ರಿ, 290 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ!? 

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News