ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ಖರ್ಗೆ,ಮುಕುಲ್ ವಾಸ್ನಿಕ್ ಮೂಂಚೂಣಿ- ಮೂಲಗಳು

 ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ನೂತನ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ. ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈಗ ಅಧ್ಯಕ್ಷ ಹುದ್ದೆ ಖಾಲಿ ಉಳಿದಿದೆ.

Last Updated : Aug 9, 2019, 06:42 PM IST
ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ಖರ್ಗೆ,ಮುಕುಲ್ ವಾಸ್ನಿಕ್ ಮೂಂಚೂಣಿ- ಮೂಲಗಳು  title=
PHOTO:PTI

ನವದೆಹಲಿ: ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ನೂತನ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ. ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈಗ ಅಧ್ಯಕ್ಷ ಹುದ್ದೆ ಖಾಲಿ ಉಳಿದಿದೆ.

ರಾಹುಲ್ ಗಾಂಧಿ ರಾಜೀನಾಮೆ ನೀಡಿ ಹಲವು ತಿಂಗಳುಗಳು ಕಳೆದರು ಕೂಡ ಇನ್ನು ಒಮ್ಮತದ ನಿರ್ಧಾರ ಬರುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿತ್ತು. ಆದರೆ ನಾಳೆ ನಡೆಯುವ ಪಕ್ಷದ ಉನ್ನತ ಸಭೆಯಲ್ಲಿ ಬಹುತೇಕ ಅಂತಿಮ ನಿರ್ಧಾರ ಹೊರಬಿಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈಗ ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ರಾಹುಲ್ ಗಾಂಧಿ ನಂತರ ಖಾಲಿ ಉಳಿದಿರುವ ಅಧ್ಯಕ್ಷ ಹುದ್ದೆಗೆ ಮುಕುಲ್ ವಾಸ್ನಿಕ್ ಮುಂಚೂಣಿ ವ್ಯಕ್ತಿ ಎಂದು ಹೇಳಲಾಗುತ್ತಿದೆ. ನಾಳೆ ಎರಡು ದಶಕಗಳ ನಂತರ ಮೊದಲ ಬಾರಿಗೆ ಗಾಂಧಿಯೇತರರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ. 59 ವರ್ಷದ ಮುಕುಲ್ ವಾಸ್ನಿಕ್ ಹೆಚ್ಚಿನ ಆಡಳಿತಾತ್ಮಕ ಅನುಭವ ಹೊಂದಿದ್ದು, ಕನಿಷ್ಠ ಸಾಂಸ್ಥಿಕ ಚುನಾವಣೆಯವರೆಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮುಕುಲ್ ವಾಸ್ನಿಕ್ ಅವರ ಸುದೀರ್ಘ ಆಡಳಿತಾತ್ಮಕ ದಾಖಲೆಯೊಂದಿಗೆ ಕಾಂಗ್ರೆಸ್ ನ ಸಾಂಸ್ಥಿಕ ದೌರ್ಬಲ್ಯಗಳನ್ನು ಸರಿಪಡಿಸಲು ಸೂಕ್ತ ಆಯ್ಕೆಯಾಗಿದೆ ಎನ್ನಲಾಗಿದೆ. ವಾಸ್ನಿಕ್ ಅವರು ಪಿ.ವಿ.ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಕಾಂಗ್ರೆಸ್ ಸರ್ಕಾರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಸೋನಿಯಾ ಗಾಂಧಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ ಈ ಹಿನ್ನಲೆಯಲ್ಲಿ ಅವರಿಗೆ ಹೆಚ್ಚಿಗೆ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೊಂದೆಡೆ 2014-19 ರ ವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರಾಗಿ ಗಮನ ಸೆಳೆದಿದ್ದ ಮಲ್ಲಿಕಾರ್ಜುನ್ ಖರ್ಗೆ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸಿದ್ದರು. ಇನ್ನು  ಗಾಂಧಿ ಕುಟುಂಬಕ್ಕೆ ಅವರು ಹತ್ತಿರವಾಗಿರುವುದರಿಂದ ಕೊನೆ ಕ್ಷಣದಲ್ಲಿ ಪಕ್ಷ ಅವರಿಗೂ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವು 134 ವರ್ಷಗಳ ಇತಿಹಾಸದಲ್ಲಿ ಹೆಚ್ಚಾಗಿ ನೆಹರೂ-ಗಾಂಧಿ ಕುಟುಂಬದ ಸದಸ್ಯರು ಸ್ವಾತಂತ್ರೋತ್ತರ ಅವಧಿಯಲ್ಲಿ ಪಕ್ಷದ ನೇತೃತ್ವವನ್ನು ವಹಿಸಿದ್ದಾರೆ. ಈ ಬಾರಿ ಮೂವರು ಗಾಂಧಿಗಳು ರಾಜಕೀಯದಲ್ಲಿದ್ದರೂ ಕೂಡ ಈ ಪ್ರಕ್ರಿಯೆಯ ಭಾಗವಾಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

  

Trending News