"ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿದ್ದಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು"

ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

Written by - Prashobh Devanahalli | Edited by - Manjunath N | Last Updated : Jan 4, 2024, 04:16 PM IST
  • ರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದ ಕಾಂಗ್ರೆಸ್‌: ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ
  • ಅಯೋಧ್ಯೆಗೆ ಹೋಗುವವರನ್ನು ಬೆದರಿಸಲು ಸರ್ಕಾರ ಪ್ರಯತ್ನ, ಶ್ರೀಕಾಂತ ಪೂಜಾರಿ ಕ್ರಿಮಿನಲ್‌ ಅಲ್ಲ
 "ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿದ್ದಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು" title=

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದರು ಎಂದರು.

ಇದನ್ನೂ ಓದಿ : ಅಯೋಧ್ಯೆಯಲ್ಲಿ ನಗರ ಯಾತ್ರೆ ವೇಳೆ ಶ್ರೀರಾಮನ ಕಣ್ಣಿಗೆ ಪಟ್ಟಿ ಕಟ್ಟುವ ಹಿಂದಿನ ಕಾರಣ ಇದು! 

ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ. ಕಾಂಗ್ರೆಸ್‌ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್‌ ಎಂದು ಹೇಳುವ ಕಾಂಗ್ರೆಸ್‌ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್‌ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಡಿ.ಕೆ.ಶಿವಕುಮಾರ್‌, ಶಶಿ ತರೂರ್‌ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ : INDIA Alliance: 9 ರಾಜ್ಯಗಳಲ್ಲಿ ಮೈತ್ರಿ, 290 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ!? 

ಅದ್ದೂರಿ ಸ್ವಾಗತ ಕೋರಿದ್ದ ಕಾಂಗ್ರೆಸ್‌

ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲಾದಾಗ ಎಲ್ಲರೂ ಪ್ರತಿಭಟಿಸಿದರು. ಕ್ರಿಮಿನಲ್‌ ಪ್ರಕರಣದಲ್ಲಿ ಬೇಲ್‌ ಪಡೆದು ಹೊರಬಂದಾಗ ಅದ್ದೂರಿ ಸ್ವಾಗತ ಕೋರಿದರು. ಆಟೋರಿಕ್ಷಾ ಓಡಿಸುವ ಬಡವರಿಗೆ ಒಂದು ಕಾನೂನು, ಶ್ರೀಮಂತರಿಗೆ ಒಂದು ಕಾನೂನು. ಸಿದ್ದರಾಮಯ್ಯನವರು ಶ್ರೀಮಂತರ ಪರ ವಕಾಲತ್ತು ವಹಿಸುತ್ತಿದ್ದಾರೆ. ನಾನು ಕೂಡ ಸಚಿವನಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರನ್ನು ಲಾಂಗ್‌ ಪೆಂಡಿಂಗ್‌ ಕೇಸ್‌ ನೆಪದಲ್ಲಿ ಜೈಲಿಗೆ ಹಾಕಿಲ್ಲ. ಅಯೋಧ್ಯಾ ಶ್ರೀರಾಮಮಂದಿರ ಉದ್ಘಾಟನೆಗೆ ಅಡ್ಡಿಪಡಿಸಲು ಈ ರೀತಿ ಮಾಡುತ್ತಿದ್ದಾರೆ. ಗೋಧ್ರಾ ಹತ್ಯಾಕಾಂಡದ ಕುರಿತು ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ರಾಷ್ಟ್ರವಾದರೆ ಇದು ಪಾಕಿಸ್ತಾನ ಆಗಲಿದೆ ಎಂದು ಮಾಜಿ ಶಾಸಕ ಯತೀಂದ್ರ ಹೇಳಿದ್ದಾರೆ. ಇದು ಎಂದಿಗೂ ಪಾಕಿಸ್ತಾನವಾಗಲು ಸಾಧ್ಯವಿಲ್ಲ. ಇದನ್ನು ಮುಸಲ್ಮಾನ ರಾಷ್ಟ್ರ ಮಾಡಬೇಕೆ ಎಂದು ಪ್ರಶ್ನಿಸಿದರು.

ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದವರನ್ನು ಕಾಂಗ್ರೆಸ್‌ ಬಿಟ್ಟುಬಿಟ್ಟಿದೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರೇ ಆರೋಪಿಗಳಾಗಿದ್ದಾರೆ. ಶ್ರೀಕಾಂತ ಪೂಜಾರಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಇತರರು ಅಪರಾಧಿ ಅಲ್ಲ, ದಾಖಲೆ ಇಲ್ಲ ಎಂದು ಆದೇಶ ಬಂದಿದೆ. ಶ್ರೀಕಾಂತರಿಗೆ ಕಾನೂನು ನೆರವು ಪಡೆಯಲು ಕೂಡ ಅವಕಾಶ ನೀಡಿಲ್ಲ. ತಲೆಮರೆಸಿಕೊಂಡಿದ್ದಾನೆಂದು ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್‌ ತೋರಿಸಿ ಅಥವಾ ಎಫ್‌ಐಆರ್‌ ಪ್ರತಿ ತೋರಿಸಿ ಎಂದು ಸವಾಲು ಹಾಕಿದರು.  

ಸರ್ಕಾರಕ್ಕೆ ಪ್ರಶ್ನೆಗಳನ್ನಿಟ್ಟ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಶ್ರೀಕಾಂತ ಪೂಜಾರಿ ತಲೆಮರೆಸಿಕೊಂಡಿದ್ದಾನೆ ಎಂದಿದ್ದಾರೆ. ಆದರೆ ನೋಟಿಸ್‌ ಏಕೆ ನೀಡಿಲ್ಲ?

ಕೋರ್ಟ್‌ಗೆ ರಜೆ ಇರುವಾಗ ಬಂಧನ ಮಾಡಿದ್ದೇಕೆ?

ಎಫ್‌ಐಆರ್‌ ಪ್ರತಿ ಏಕೆ ನೀಡಿಲ್ಲ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News