ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತರಲು ಉದ್ದೇಶಿಸಿರುವ ಕಾಯ್ದೆಯಲ್ಲಿರುವ ಕೆಲವು ಲೋಪ ದೋಷಗಳನ್ನು ನಿವಾರಣೆ ಮಾಡುವಂತೆ ಆಗ್ರಹಿಸಿ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಫೆಡರೇಷನ್ ಆಫ್ ಲಾರಿ ಓನರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಸಿ.ನವೀನ್ ರೆಡ್ಡಿ, ಅಸೋಸಿಯೇಷನ್ ನ ಸದಸ್ಯರು ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಪ್ರತಿಷ್ಠಿತ ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ ಇನ್ನಿಲ್ಲ
ಹೊರ ರಾಜ್ಯಗಳಲ್ಲಿ ಅಪಘಾತ ಸಂಭವಸಿದಾಗ ಚಾಲಕರ ಡ್ರೈವಿಂಗ್ ಲೈಸೆನ್ಸ್ ಅನ್ನು ವಶಪಡಿಸಿಕೊಳ್ಳಲಾಗುತ್ತದೆ. ಘಟನೆಗೆ ಸಂಬಂಧಿಸಿದಂತೆ ಜಾಮೀನು ನೀಡಲು ಸ್ಥಳೀಯರ ಭದ್ರತೆ ಕೇಳಲಾಗುತ್ತದೆ. ಇದರಿಂದ ಲಾರಿ ಚಾಲಕರಿಗೆ ತೊಂದರೆ ಆಗುತ್ತದೆ. ಆದ್ದರಿಂದ ಕೂಡಲೇ ಪ್ರಸ್ತಾವಿತ ಕಾಯ್ದೆಯಲ್ಲಿ ಇರುವ ಈ ಅಂಶವನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಅಪಘಾತ ಸಂಭವಿಸಿದಾಗ ಲಾರಿಗಳನ್ನು ವಶಪಡಿಸಿಕೊಂಡು ಹಿಂತಿರುಗಿಸಲು ಸತಾಯಿಸುವುದು, ವಿನಾ ಕಾರಣ ಸಂಚಾರ ದಟ್ಟಣೆ ನೆಪದಲ್ಲಿ ಲಾರಿಗಳಿಗೆ ದಂಡ ವಿಧಿಸುವುದು ಸೇರಿದಂತೆ ಇನ್ನತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.
ಇದನ್ನೂ ಓದಿ:ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು!
ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥ ಚಾಲಕರಿಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಸೇರಿದಂತೆ ಅಪಾರ ಮೊತ್ತದ ದಂಡ ಹಾಕುವ ಪ್ರಸ್ತಾವನೆ ಮಾಡಿರುವುದರಿಂದ ದೇಶಾದ್ಯಂತ ಲಾರಿ, ಟ್ರಕ್ ಚಾಲಕರು ಆತಂಕಕ್ಕೆ ಒಳಗಾಗಿದ್ದಾರೆ. ಲಾರಿ ಮಾಲೀಕರನ್ನಾಗಲೀ ಅಥವಾ ಈ ಉದ್ಯಮದಲ್ಲಿ ಇರುವ ಯಾರನ್ನೂ ಸಂಪರ್ಕಿಸದೇ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇಶಾದ್ಯಂತ ಲಾರಿ, ಟ್ರಕ್ ಸೇರಿದಂತೆ ಇನ್ನಿತರ ವಾಣಿಜ್ಯ ವಾಹನಗಳಿಗೆ ಚಾಲಕರ ಕೊರತೆ ಪ್ರಮಾಣ ಅಧಿಕವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ಚಾಲಕರು ತಮ್ಮ ವೃತ್ತಿಯನ್ನು ಮುಂದುವರಿಸಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ನವೀನ್ ರೆಡ್ಡಿ ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ:ಖಾಸಗಿ ಸಾರಿಗೆಗೂ ʼಶಕ್ತಿ ಯೋಜನೆʼ ವಿಸ್ತರಿಸುವಂತೆ ಸರ್ಕಾರಕ್ಕೆ ಸೂಚಸಿದ ಹೈಕೋರ್ಟ್..!
ಲಾರಿ ಉದ್ಯಮ ಮತ್ತು ಚಾಲಕರ ಹಿತದೃಷ್ಟಿಯನ್ನೂ ಗಮನದಲ್ಲಿಟ್ಟುಕೊಂಡು ಪ್ರಸ್ತಾವಿತ ಕಾಯ್ದೆಯಲ್ಲಿ ಇರುವ ಕಠಿಣ ಕಾನೂನುಗಳನ್ನು ಸಡಿಲಗೊಳಿಸಬೇಕು. ತಕ್ಷಣವೇ ಪ್ರಸ್ತಾವಿತ ಕಾನೂನನ್ನು ಪರಿಷ್ಕರಿಸದಿದ್ದರೆ ಜನವರಿ 17 ರಿಂದ ದೇಶಾದ್ಯಂತ ಅನಿರ್ದಿಷ್ಟಾವಧಿವರೆಗೆ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಸರ್ಕಾರಕ್ಕೆ ಗಡುವು ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.