ಕಾಶ್ಮೀರ, ಲಡಾಖ್ ಕುರಿತ ಘೋಷಣೆಗಳು ಸದ್ಯದಲ್ಲೇ ಹೊರಬೀಳಲಿವೆ-ಮುಖೇಶ್ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ತಮ್ಮ ಕಂಪನಿಯು ಜಮ್ಮು ಮತ್ತು ಕಾಶ್ಮೀರ ಮತ್ತು ಇತ್ತೀಚೆಗೆ ರಚನೆಯಾದ ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್  ಕುರಿತಾಗಿ ಹಲವು ಯೋಜನೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

Last Updated : Aug 12, 2019, 05:21 PM IST
ಕಾಶ್ಮೀರ, ಲಡಾಖ್ ಕುರಿತ ಘೋಷಣೆಗಳು ಸದ್ಯದಲ್ಲೇ ಹೊರಬೀಳಲಿವೆ-ಮುಖೇಶ್ ಅಂಬಾನಿ  title=
file photo

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ತಮ್ಮ ಕಂಪನಿಯು ಜಮ್ಮು ಮತ್ತು ಕಾಶ್ಮೀರ ಮತ್ತು ಇತ್ತೀಚೆಗೆ ರಚನೆಯಾದ ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್  ಕುರಿತಾಗಿ ಹಲವು ಯೋಜನೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು “ಪ್ರಧಾನಿ ನರೇಂದ್ರ ಮೋದಿ ಜಿ ಅವರ ಕರೆಗೆ ಸ್ಪಂದಿಸುತ್ತಾ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಜನರ ಅಗತ್ಯಗಳಿಗೆ ಬದ್ಧರಾಗಿದ್ದೇವೆ. ಮುಂದಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗಾಗಿ ನೀವು ಹಲವಾರು ಘೋಷಣೆಗಳನ್ನು ನೋಡುತ್ತೀರಿ ” ಎಂದು ಅಂಬಾನಿ ಹೇಳಿದ್ದಾರೆ.ಇತ್ತೀಚಿಗೆ ಜಮ್ಮುಮತ್ತು ಕಾಶ್ಮೀರಕ್ಕೆ ನೀಡಲಾದ ಸ್ಥಾನಮಾನ ವಾಪಸ್ ತೆಗೆದುಕೊಂಡು ಕಾಶ್ಮೀರವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮುಖೇಶ್ ಅಂಬಾನಿಯವರ ಹೇಳಿಕೆ ಬಂದಿದೆ.

ಕಾಶ್ಮೀರದ ಕುರಿತಾಗಿ ಕೇಂದ್ರ ಸರ್ಕಾರದ ನಿರ್ಧಾರದ ಕೆಲವು ದಿನಗಳ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ  ಜಮ್ಮು ಕಾಶ್ಮೀರದ ಅಭಿವೃದ್ದಿಗಾಗಿ ದೇಶದ ಜನರು ಮುಂದೆ ಬರಬೇಕು ಮತ್ತು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕು ಎಂದು ಅವರು ಹೇಳಿದ್ದರು.

Trending News