ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅವರು ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ: ಮಂಗಳೂರು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮಿಶ್ರ ಸಮರ ಕಲೆಯಲ್ಲಿ 2 ಚಿನ್ನದ ಪದಕ!
ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು.2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಬಿಜೆಪಿಯಿಂದ ರಾಮಮಂದಿರದ ಪವಿತ್ರ ಮಂತ್ರಾಕ್ಷತೆ ವುತರಣೆ ಅಭಿಯಾನ
ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1,600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ.ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷ ಗೌರವವಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.